ಬದಿಯಡ್ಕ: ಸ್ವಚ್ಛತಾ ಹಿ ಸೇವಾ ಅಭಿಯಾನದಡಿಯಲ್ಲಿ ಬದಿಯಡ್ಕ ಗ್ರಾಮ ಪಂಚಾಯಿತಿ ಹಾಗೂ ಶುಚಿತ್ವ ಮಿಷನ್‍ನ ಜಂಟಿ ಆಶ್ರಯದಲ್ಲಿ ಸಾರ್ವಜನಿಕ ಸ್ಥಳಗಳ ಶುಚೀಕರಣ ಕಾರ್ಯಕ್ರಮದ ಉದ್ಘಾಟನೆ ಪಂಚಾಯಿತಿ ಪರಿಸರದಲ್ಲಿ ಗುರುವಾರ ನಡೆಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಶಂಕರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನೈರ್ಮಲ್ಯ ಹಾಗೂ ಸ್ವಚ್ಛತೆಯು ಕೇವಲ ಸರ್ಕಾರದ ಅಥವಾ ಪಂಚಾಯಿತಿಯ ಹೊಣೆಗಾರಿಕೆಯಲ್ಲ, ಸಾರ್ವಜನಿಕರ ಸಕ್ರಿಯ ಸಹಭಾಗಿತ್ವ ಅತ್ಯಗತ್ಯ, ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ. ವಹಿಸಿದ್ದರು.
ಜಿಲ್ಲಾ ಪಂಚಾಯಿತಿ ಸದಸ್ಯ ರಾಮಪ್ಪ ಮಂಜೇಶ್ವರ, ಅಭಿವೃದ್ಧಿ ಸ್ಥಾಯಿಸಮಿತಿ ಅಧ್ಯಕ್ಷ ಹಮೀದ್ ಕೆಡೆಂಜಿ, ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿಸಮಿತಿ ಅಧ್ಯಕ್ಷ ಅವಿನಾಶ್ ರೈ, ಸದಸ್ಯರುಗಳಾದ ಗಂಗಾಧರ ಗೋಳಿಯಡ್ಕ, ಬಾಲಕೃಷ್ಣ ಶೆಟ್ಟಿ ಕೆ., ಮಾಹಿನ್ ಕೇಳೋಟ್, ಹರೀಶ ಎ., ಶ್ಯಾಮಪ್ರಸಾದ ಸರಳಿ, ಉಷಾ ಪಳ್ಳತ್ತಡ್ಕ, ಮಧುಸೂದನ ಕಂಗಿಲ, ಹಸಿರು ಕ್ರಿಯಾಸೇನೆಯ ಸದಸ್ಯರು, ಸಿಡಿಎಸ್ ಅಧ್ಯಕ್ಷೆ ಸುಲೋಚನ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಅಜಿತ್ ಕುಮಾರ್, ಸಹಾಯಕ ಕಾರ್ಯದರ್ಶಿ ಸಜಿ, ಸಿಬ್ಬಂದಿಗಳು, ಸಾರ್ವಜನಿಕರು, ವ್ಯಾಪಾರಿಗಳು ಪಾಲ್ಗೊಂಡಿದ್ದರು.

.jpeg)
