ನವದೆಹಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ 4.9ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಇದರಿಂದ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಪನಿಸಿದ ಅನುಭವವಾಗಿದೆ.
ಉತ್ತರಾಖಂಡದ ಚಮೋಲಿಯಲ್ಲಿ 13 ಕಿಲೋ ಮೀಟರ್ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಇತ್ತು ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ಮಾಹಿತಿ ನೀಡಿದೆ.
ಮಂಗಳವಾರ ರಾತ್ರಿ 10.23ರ ಹೊತ್ತಿನಲ್ಲಿ ಭೂಕಂಪದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 4.9ರಷ್ಟು ತೀವ್ರತೆ ದಾಖಲಾಗಿದೆ ಎಂದು ಉತ್ತರಾಖಂಡ ರಾಜ್ಯ ವಿಕೋಪ ನಿರ್ವಹಣಾ ಪ್ರಾಧಿಕಾರ ವರದಿ ಮಾಡಿದೆ.
ಉತ್ತರಾಖಂಡ ರಾಜಧಾನಿ ಡೆಹ್ರಾಡೂನ್ ಸೇರಿದಂತೆ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ತಕ್ಷಣ ನಿವಾಸಿಗಳು ಹೆದರಿ ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ ಎಂದು ವರದಿಯಾಗಿದೆ.



