HEALTH TIPS

ಪ್ರತಿಭಟನೆಗಳಿಗೆ ಜಂತರ್‌ ಮಂತರ್‌ಗೆ ಪರ್ಯಾಯ ಸ್ಥಳ ಗುರುತಿಸಿ: ಸುಪ್ರೀಂ ಕೋರ್ಟ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ಜಂತರ್ ಮಂತರ್‌ಗೆ ಪರ್ಯಾಯ ಸ್ಥಳವನ್ನು ಗುರುತಿಸುವ ಬಗ್ಗೆ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.


ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ಕೆಲವು ವಿದ್ಯಾರ್ಥಿ ಸಂಘಟನೆಗಳು ಅ. 10ರಂದು ಕರೆ ನೀಡಿವೆ. ಹೀಗಾಗಿ ಮೆಟ್ರೊ ನಿಲ್ದಾಣಗಳ ಮೇಲೆ ನಿರ್ಬಂಧ ಹೇರುವ ಪ್ರಸ್ತಾವ ಮತ್ತು ರಾಷ್ಟ್ರ ರಾಜಧಾನಿಗೆ ಆಗಮಿಸುವ ರೈಲುಗಳ ಸಂಚಾರ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಪ್ರತಿಭಟನಾಕಾರರಿಗೆ ಮೂಲ ಸೌಕರ್ಯಗಳು ಲಭ್ಯವಿರುವ ಸ್ಥಳವನ್ನು ಗುರುತಿಸುವ ಅಗತ್ಯವನ್ನು ನ್ಯಾಯಾಲಯ ಒತ್ತಿಹೇಳಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರಿದ್ದ ನ್ಯಾಯಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿತು.

ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ಜಂತರ್ ಮಂತರ್ ಹೊರತುಪಡಿಸಿ ಬೇರೆ ಸ್ಥಳವನ್ನು ಗುರುತಿಸುವ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರ ಪರಿಶೀಲಿಸಲಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಪೀಠಕ್ಕೆ ತಿಳಿಸಿದರು.

'ಶಾಂತಿಯುತ ಮತ್ತು ಕಾನೂನುಬದ್ಧವಾಗಿ ಪ್ರತಿಭಟನೆ ನಡೆಸುವವರಿಗೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಬಹುದಾದ ಸೂಕ್ತ ಸ್ಥಳವೊಂದನ್ನು ಗುರುತಿಸುವ ಸಮಯ ಬಂದಿದೆ ಎಂಬ ಸಲಹೆಯನ್ನೂ ನೀಡಲಾಯಿತು. ಇದಕ್ಕೆ ಸಂಬಂಧಿಸಿದ ಎಲ್ಲ ಪಕ್ಷಗಳ ಹಿರಿಯ ವಕೀಲರು ಮತ್ತು ವಕೀಲರು ಸಹಮತ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಪ್ರಾಧಿಕಾರವು ಈ ಸಲಹೆಯನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿ' ಎಂದು ನ್ಯಾಯಪೀಠ ಹೇಳಿತು.

ನಿಗದಿತ ಪ್ರತಿಭಟನಾ ಸ್ಥಳವಾದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಸಿಜೆಪಿ ಮತ್ತು ಭಾರತೀಯ ಯುವ ಕಾಂಗ್ರೆಸ್‌ಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಲಾಯಿತು. ಪ್ರತಿಭಟನೆಗಳನ್ನು ರಾಮಲೀಲಾ ಮೈದಾನದಲ್ಲಿ ನಡೆಸುವ ಸಾಧ್ಯತೆಯನ್ನೂ ಪರಿಶೀಲಿಸಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಲಾಯಿತು.

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೊಡದಿದ್ದರೆ, ರಾಮಲೀಲಾ ಮೈದಾನದಲ್ಲಿ ಸೇರಲು ಅಧಿಕಾರಿಗಳು ಅವಕಾಶ ನೀಡಬಹುದಿತ್ತು ಎಂದು ವಕೀಲ ಪ್ರಶಾಂತ್ ಭೂಷಣ್ ವಾದಿಸಿದರು.

ಆದರೆ, ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳನ್ನು ನಡೆಸುವುದರಿಂದ ಎದುರಾಗುವ ಸಮಸ್ಯೆಗಳನ್ನು ಸಿಜೆಐ ಉಲ್ಲೇಖಿಸಿದರು. 'ಅಲ್ಲಿ ಸರ್ಕಾರಿ ವಸತಿಗೃಹಗಳಿವೆ. ಮುಂಭಾಗದ ರಸ್ತೆಯಲ್ಲಿ ಕೆಲವು ಸಂಸದರು ವಾಸಿಸುತ್ತಿದ್ದಾರೆ. ಪ್ರತಿಭಟನಾಕಾರರಿಗೂ ಸಾಕಷ್ಟು ಸಮಸ್ಯೆಗಳಿವೆ' ಎಂದರು.

ಪ್ರತಿಭಟನಾ ಸ್ಥಳದಲ್ಲಿ ತುರ್ತು ವೈದ್ಯಕೀಯ ನೆರವು ಒದಗಿಸಲು ಸಮಸ್ಯೆ ಉಂಟಾಗಬಹುದು. ಅನಾರೋಗ್ಯ ಉಂಟಾದರೆ, ಆ ಸ್ಥಳಕ್ಕೆ ಆಂಬುಲೆನ್ಸ್ ತಲುಪುವುದಕ್ಕೂ ತೊಂದರೆಯಾಗಬಹುದು ಎಂದು ಸಾಲಿಸಿಟರ್ ಜನರಲ್ ಹೇಳಿದರು.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries