ಜಮ್ಮು/ಶ್ರೀನಗರ(PTI): ಜಮ್ಮು-ಕಾಶ್ಮೀರದ ರಾಜ್ಯಸ್ಥಾನಮಾನ ಪುನರ್‌ಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿರುವುದನ್ನು ಖಂಡಿಸಿ ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರದ ವಿರುದ್ಧ ಬಿಜೆಪಿಯು ಜಮ್ಮು ಮತ್ತು ಶ್ರೀನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿತು.
'ಸಮಗ್ರ ಚರ್ಚೆ ನಡೆಸದೆ ನಿರ್ಣಯವನ್ನು ಅಂಗೀಕರಿಸಲಾಗಿದೆ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಚುನಾವಣಾ ಪೂರ್ವದಲ್ಲಿ ನೀಡಿರುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ' ಎಂದು ಬಿಜೆಪಿ ಆರೋಪಿಸಿದೆ.
ಜಮ್ಮುವಿನಲ್ಲಿ ಸಂಸದ ಜುಗಲ್ ಕಿಶೋರ್ ಶರ್ಮ ಮತ್ತು ಇತರ ಹಿರಿಯ ನಾಯಕರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಮೆರವಣಿಗೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

