ಕಾಸರಗೋಡು: ನೀಲೇಶ್ವರಂ ಪುರಮೇರಿ ನಿವಾಸಿ, ಗ್ರಾಮ ಪಂಚಾಯತ್ ತಾತ್ಕಾಲಿಕ ಸಿಬ್ಬಂದಿ ಸಿ.ಪಿ. ಗೋಪಿನಾಥ್ (63) ಅವರ ಮೃತದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಚೆರ್ವತ್ತೂರು ಗ್ರಾಮ ಪಂಚಾಯತ್ನಲ್ಲಿ ತಾತ್ಕಾಲಿಕ ನೌಕರರಾಗಿದ್ದ ಗೋಪಿನಾಥ್ ಅವರ ಮೃತದೇಹ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯಲ್ಲಿ ಪತ್ತೆಯಾಗಿದೆ. ಎರಡು ದಿನಗಳ ಹಿಂದೆ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಘಟನೆಗೆ ಸಂಬಂಧಿಸಿ ಹೊಸದುರ್ಗ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


