HEALTH TIPS

ನಾಳೆ ಕೇರಳ ಕೇಂದ್ರೀಯ ವಿವಿಯಲ್ಲಿ ‘ಸಾಹಿತ್ಯ ಸಂಸ್ಕೃತಿ ಸಿರಿ’


ಹರೇಕಳ ಹಾಜಬ್ಬರಿಗೆ ಸನ್ಮಾನ; ‘ಮಹಿಷಮರ್ದಿನಿ’ ಯಕ್ಷಗಾನ ಬಯಲಾಟ ಪ್ರದರ್ಶನ

ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ವತಿಯಿಂದ ಅಕ್ಟೋಬರ್ 29ರಂದು(ನಾಳೆ) ‘ಸಾಹಿತ್ಯ ಸಂಸ್ಕೃತಿ ಸಿರಿ’ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಶ್ವವಿದ್ಯಾಲಯದ ಪಯಸ್ವಿನಿ ಸಭಾಂಗಣದಲ್ಲಿ ಮಧ್ಯಾಹ್ನ 4 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕುಲಪತಿ ಪ್ರೊ. ಸಿದ್ದು ಪಿ. ಅಲಗೂರು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಗುವುದು. ಕನ್ನಡ ಸಾಹಿತ್ಯ ಪರಿಷತ್ತಿನ ಕೇರಳ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ತೊಟ್ಟೆತ್ತೋಡಿ ಅವರು ‘ಕರಾವಳಿ ಕಲಾ ಸಂಪತ್ತು’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ವಿಶ್ವವಿದ್ಯಾಲಯದ ಕುಲಸಚಿವ ಡಾ. ಜಯಪ್ರಕಾಶ್ ಆರ್., ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕ ಪ್ರೊ. ರಾಜೇಂದ್ರ ಪಿಲಾಂಕಟ್ಟ, ಅಕಾಡೆಮಿಕ್ ವಿಭಾಗದ ಡೀನ್ ಪ್ರೊ. ಜೋಸೆಫ್ ಕೋಯಿಪಲ್ಲಿ ಹಾಗೂ ಭಾಷೆ ಮತ್ತು ತೌಲನಿಕ ಅಧ್ಯಯನ ವಿಭಾಗದ ಡೀನ್ ಪ್ರೊ. ತಾರು ಎಸ್. ಪವಾರ್ ಉಪಸ್ಥಿತರಿರಲಿದ್ದಾರೆ.

ಯಕ್ಷಗಾನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

ಸಂಜೆ 4.30ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲಿಗೆ ಕನ್ನಡ ವಿಭಾಗದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಪ್ರದರ್ಶನಗಳು ಜರುಗಲಿವೆ. ಸಂಜೆ 5ರಿಂದ 5.30ರವರೆಗೆ ಪ್ರಶಸ್ತಿ ವಿಜೇತ ವಿಶ್ವವಿದ್ಯಾಲಯದ ಸಾಂಸ್ಕೃತಿಕ ತಂಡದಿಂದ ಸಾಂಪ್ರದಾಯಿಕ ಕಲಾ ಪ್ರದರ್ಶನ ನಡೆಯಲಿದೆ.

ಸಂಜೆ 5.30ರಿಂದ 6.30ರವರೆಗೆ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಖ್ಯಾತ ಕಲಾವಿದರ ಸಹಭಾಗಿತ್ವದಲ್ಲಿ ‘ಮಹಿಷಮರ್ದಿನಿ’ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.

ಕನ್ನಡ ವಿಭಾಗದ ಪ್ರಭಾರ ಮುಖ್ಯಸ್ಥ ಡಾ. ಪ್ರವೀಣ ಪಿ., ಪ್ರಾಧ್ಯಾಪಕ ಪ್ರೊ. ಮಾಧವ ಎಂ.ಕೆ., ಕಾರ್ಯಕ್ರಮ ಸಂಯೋಜಕರಾದ ಡಾ. ಸೌಮ್ಯ ಹೆಚ್., ಡಾ. ಗೋವಿಂದರಾಜು ಕೆ.ಎಂ. ಹಾಗೂ ಜೇತನ್ ಮುಂಡಾಜೆ, ವಿದ್ಯಾರ್ಥಿ ಸಂಯೋಜಕರಾದ ಸಂಜಯ್ ಉಪ್ಪಿನ್, ಮನೀಷ್ ಮತ್ತು ಪವನ್ ಕುಮಾರ್ ಸೇರಿದಂತೆ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದ ಆಯೋಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಸಾಹಿತ್ಯ, ಸಂಸ್ಕೃತಿ ಹಾಗೂ ಕರಾವಳಿಯ ಕಲಾಪರಂಪರೆಯನ್ನು ಪರಿಚಯಿಸುವ ಉದ್ದೇಶದಿಂದ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಆಹ್ವಾನಿಸಿದ್ದಾರೆ.


 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries