HEALTH TIPS

ದೇಶ ಅಸ್ಥಿರಗೊಳಿಸಲು ಸಂಚು; ರಾಹುಲ್, ಸಿಜೆಪಿ ವಿರುದ್ಧ ಬಿಜೆಪಿ ವಾಗ್ದಾಳಿ

ನವದೆಹಲಿ: ದೇಶದಲ್ಲಿ ಇಂದು ಅತ್ಯಂತ ಅಪಾಯಕಾರಿ ಹಾಗೂ ಗಂಭೀರ ಪರಿಸ್ಥಿತಿಯನ್ನು ನಿರ್ಮಿಸಲು ಯತ್ನಿಸಲಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


140 ಕೋಟಿ ಜನರು ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕುತ್ತ, ಭಾರತದ ಅಭಿವೃದ್ಧಿಗೆ ಒಟ್ಟಾಗಿ ಶ್ರಮಿಸುತ್ತಿರುವ ಈ ಸಂದರ್ಭದಲ್ಲಿ ದೇಶವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಗಂಭೀರ ಆರೋಪ ಮಾಡಿದರು. 

ರಾಹುಲ್ ಗಾಂಧಿ ನೇತೃತ್ವದ ಇಂಡಿಯಾ ಮೈತ್ರಿಕೂಟ ಗುಂಪು ಹಾಗೂ ಅರವಿಂದ್ ಕೇಜ್ರಿವಾಲ್ ಬೆಂಬಲಿತ ಸಿಜಿಪಿ ಗುಂಪು ದೇಶವನ್ನು ಅತಂತ್ರಗೊಳಿಸುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು.

' ಈ ಎರಡೂ ಗುಂಪುಗಳಿಗೆ ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ, ಭಾರತದ ಜನತೆಗೆ ನಿಮ್ಮ ನೈಜ ಉದ್ದೇಶ ಏನೆಂಬುದು ಸ್ಪಷ್ಟವಾಗಿ ಅರ್ಥವಾಗಿದೆ. ದೇಶದಲ್ಲಿ ಯಾರು ಹೆಚ್ಚು ಅಸ್ಥಿರತೆ ಸೃಷ್ಟಿಸಬಹುದು ಎಂದು ಸ್ಪರ್ಧೆಗೆ ಬಿದ್ದಿದ್ದಿರಿ. ನಿಮ್ಮ 'ಅರಾಜಕತೆಯ ಸ್ಪರ್ಧೆ' ಎಂದಿಗೂ ಯಶಸ್ವಿಯಾಗುವುದಿಲ್ಲ' ಎಂದರು.

'ಜನರಿಂದ ತಿರಸ್ಕರಿಸಲ್ಪಟ್ಟ ನೀವು, ಜನಾದೇಶವನ್ನು ಸ್ವೀಕರಿಸುವ, ಅದರಿಂದ ಪಾಠ ಕಲಿಯುವ ಬದಲಿಗೆ, ದೇಶವನ್ನು ದುರ್ಬಲಗೊಳಿಸಲು ಸಂಚು ರೂಪಿಸಿದ್ದೀರಿ. ನಿಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ವಿದೇಶಿ ಶಕ್ತಿಗಳ ಹಿತಾಸಕ್ತಿಗೆ ತಕ್ಕಂತೆ ಕೆಲಸ ಮಾಡುತ್ತಿದ್ದೀರಿ' ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ಸಾಲು ಸಾಲು ಬಿಕ್ಕಟ್ಟುಗಳಿದ್ದರೂ, ಭಾರತ ನಿರಂತರ ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ. ಆದರೆ, ಈ ಸತ್ಯವನ್ನು ನಿಮ್ಮಿಂದ ತಡೆದುಕೊಳ್ಳಲಾಗುತ್ತಿಲ್ಲ. ಭಾರತದ ಬೆಳವಣಿಗೆ, ಪ್ರಗತಿ ಮತ್ತು ಅಭಿವೃದ್ಧಿಯನ್ನು ಜೀರ್ಣಿಸಿಕೊಳ್ಳಲು ನಿಮ್ಮಿಂದ ಸಾಧ್ಯವಾಗುತ್ತಿಲ್ಲ. ಭಾರತವು ಸ್ವಾವಲಂಬಿ ಮತ್ತು ಶಕ್ತಿಶಾಲಿ ದೇಶವಾಗಿ ಹೊರಹೊಮ್ಮುತ್ತಿರುವುದನ್ನು ಸಹಿಸಿಕೊಳ್ಳಲು ಒಪ್ಪಿಕೊಳ್ಳಲಾಗದೆ ವಿದೇಶಿ ಶಕ್ತಿಗಳ ಕುಮ್ಮಕ್ಕಿನಿಂದ ದೇಶದಲ್ಲಿ ಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದೀರಿ ಎಂದರು.

ನಾನು ಸ್ಪಷ್ಟವಾಗಿ ಹೇಳುತ್ತೇನೆ, ಭಾರತೀಯ ಪ್ರಜಾಪ್ರಭುತ್ವಕ್ಕೆ ಅಗಾಧ ಶಕ್ತಿಯಿದೆ, ಈ ರಾಷ್ಟ್ರದ ದೇಶ ಪ್ರೇಮಿಗಳು ಒಗ್ಗೂಡಿ ನಿಮ್ಮ ದುಷ್ಟ ಯೋಜನೆಗಳನ್ನು ವಿಫಲಗೊಳಿಸಲಿದ್ದಾರೆ ಎಂದು ನಿತಿನ್ ನವೀನ್ ಹೇಳಿದ್ದಾರೆ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries