HEALTH TIPS

ಬದಿಯಡ್ಕ ಗ್ರಾಮ ಪಂಚಾಯಿತಿಯಲ್ಲಿ ಸಿಬ್ಬಂದಿಗಳ ಕೊರತೆ ನೀಗಿಸಲು ಆಗ್ರಹ

ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯತಿನಲ್ಲಿ ಸಿಬಂದಿಗಳ ಕೊರತೆಯಿದ್ದು ಅದನ್ನು ಸರಪಡಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕರ ಡಿ. ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಶ್ರೀಧನ್ಯ ಸುರೇಶ್ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಯಿತು. ಒಂದು ವಾರದ ಹಿಂದೆ ಆಗಮಿಸಿದ ಕಾರ್ಯದರ್ಶಿಯವರು ವರ್ಗಾವಣೆ ಪಡೆದು ಹೋಗಲು ಪ್ರಯತ್ನ ಆರಂಭಿಸಿದ್ದಾರೆ. ಇಂಜಿನಿಯರ್, ಓವರ್ಸಿಯರ್ ಹುದ್ದೆಗಳು ಖಾಲಿಯಿವೆ. ಇದರಿಂದಾಗಿ ಕಟ್ಟಡ ನಿರ್ಮಾಣ ಸಂಬಂಧ ಅಗತ್ಯಗಳಿಗಾಗಿ ಜನರು ಸಂಕಷ್ಟಪಡುತ್ತಿದ್ದಾರೆ. ವಾರ್ಷಿಕ ಯೋಜನೆಯ ಕಡತಗಳು ಆರಂಭದ ಹಂತದಲ್ಲಿಯೇ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ಮಧ್ಯಪ್ರವೇಶಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. 

ಗ್ರಾ.ಪಂ.ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ, ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಹಮೀದ್ ಕೆಡೆಂಜಿ, ಅವಿನಾಶ್ ವಿ ರೈ, ಹಿರಿಯ ಸದಸ್ಯ ಬಾಲಕೃಷ್ಣ ಶೆಟ್ಟಿ ಜೊತೆಗಿದ್ದರು. ಬದಿಯಡ್ಕ ಗ್ರಾಮ ಪಂಚಾಯತಿ ಕಚೇರಿಗೆ ವರ್ಗಾವಣೆಗೊಂಡು ಬರುವ ಸಿಬಂದಿಗಳು ಕನಿಷ್ಠ ಒಂದು ವರ್ಷವಾದರೂ ಕರ್ತವ್ಯ ನಿರ್ವಹಿಸುವಂತೆ ಆದೇಶ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries