ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅನುಮತಿ ನೀಡಲು ದೆಹಲಿ ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ.
ನಾಗರಿಕರು, ವಿದ್ಯಾರ್ಥಿಗಳು, ನೋಂದಾಯಿತ ರಾಜಕೀಯ ಪಕ್ಷಗಳ ಪದಾಧಿಕಾರಿಗಳು, ಸಂಸದರುಗಳಿಗೆ ಶಾಂತಿಯುತ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ಚಿ, ವಿ. ಮೋಹನಾ ಅವರ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿತ್ತು.

