HEALTH TIPS

‘ಶ್ರದ್ಧಾ’ ಯೋಜನೆಯ ಹೆಸರಿನಲ್ಲಿ ಅಕ್ರಮ ಆರೋಗ್ಯ ಮಾಹಿತಿ ಸಂಗ್ರಹ: ತನಿಖೆಗೆ ಜಿಲ್ಲಾಧಿಕಾರಿ ಆದೇಶ

ಕೋಟಯಂ: ಕೇರಳದ ಚಿರಕ್ಕಡವು ಗ್ರಾಮ ಪಂಚಾಯಿತಿಯ ಏಳನೇ ವಾರ್ಡ್‌ನಲ್ಲಿ ‘ಶ್ರದ್ಧಾ’ ಯೋಜನೆಯ ಹೆಸರಿನಲ್ಲಿ ಅನಧಿಕೃತವಾಗಿ ಆರೋಗ್ಯ ಮಾಹಿತಿಯನ್ನು ಸಂಗ್ರಹಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದಾರೆ. 


ಬಿಜೆಪಿ ಚಿರಕ್ಕಡವು ಏರಿಯಾ ಅಧ್ಯಕ್ಷ ಜಿತಿನ್ ಜಯಕುಮಾರ್ ಸಲ್ಲಿಸಿದ ದೂರಿನ ಆಧಾರದಲ್ಲಿ ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ.

ದೂರಿನ ಕುರಿತು ತಕ್ಷಣ ತನಿಖೆ ನಡೆಸಿ, ಕಾನೂನುಬದ್ಧ ಕ್ರಮಗಳನ್ನು ಕೈಗೊಳ್ಳುವಂತೆ ಕಾಞಿರಪಳ್ಳಿ ತಹಶೀಲ್ದಾರ್, ಕೋಟಯಂ ಜಿಲ್ಲಾ ವೈದ್ಯಾಧಿಕಾರಿ ಹಾಗೂ ಸ್ಥಳೀಯ ಸ್ವರಾಜ್ಯ ಆಡಳಿತ ಇಲಾಖೆಯ ಜಂಟಿ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಕೈಗೊಂಡ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಗೆ ವರದಿ ಸಲ್ಲಿಸುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಅಲ್ಲದೆ, ತನಿಖೆ ಪೂರ್ಣಗೊಳಿಸಿ ದೂರುದಾರರಿಗೆ ಸ್ಪಷ್ಟವಾದ ಉತ್ತರ ನೀಡಬೇಕೆಂದು ಸೂಚಿಸಲಾಗಿದೆ.

ದತ್ತಾಂಶ ಸಂರಕ್ಷಣಾ ಕಾನೂನುಗಳನ್ನು ಉಲ್ಲಂಘಿಸಿ, ಅನುಮಾನಾಸ್ಪದ ಹಿನ್ನೆಲೆಯುಳ್ಳ ಖಾಸಗಿ ಸಂಸ್ಥೆಯೊಂದು ಈ ಮಾಹಿತಿ ಸಂಗ್ರಹದ ಹಿಂದೆ ಕಾರ್ಯನಿರ್ವಹಿಸುತ್ತಿದೆ ಎಂಬುದು ದೂರಿನಲ್ಲಿರುವ ಆರೋಪವಾಗಿದೆ. ಈ ಆರೋಪಗಳ ಕುರಿತು ತನಿಖೆ ನಡೆಯಬೇಕಿದೆ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries