HEALTH TIPS

ರಾಹುಲ್ ಗಾಂಧಿ ವಿರುದ್ಧದ ಹೇಳಿಕೆಗೆ ಬದ್ಧ: ಬಿಜೆಪಿ ನಾಯಕ ಕೆ. ಶ್ರೀಕಾಂತ್

ಕಾಸರಗೋಡು: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ತಾನು ನೀಡಿರುವ ಹೇಳಿಕೆಗೆ ಬದ್ಧನಾಗಿದ್ದು, ಈ ಪ್ರಕರಣವನ್ನು ರಾಜಕೀಯವಾಗಿ ಹಾಗೂ ಕಾನೂನುಬದ್ಧವಾಗಿ ಎದುರಿಸುವುದಾಗಿ ಬಿಜೆಪಿ ಕಣ್ಣೂರು ವಲಯ ಅಧ್ಯಕ್ಷ, ವಕೀಲ ಕೆ. ಶ್ರೀಕಾಂತ್ ಸ್ಪಷ್ಟಪಡಿಸಿದ್ದಾರೆ.


ಕಣ್ಣೂರಿನಲ್ಲಿ ನಡೆದ ಸಮಾರಂಭವೊಂದರಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, "ತಮ್ಮ ವಿರುದ್ಧ ದೂರು ನೀಡಿರುವ ಶಾಸಕ ಟಿ.ಒ. ಮೋಹನನ್ ಅವರ ಕ್ರಮ ಬಾಲಿಶವಾದದ್ದು. ಸುಳ್ಳು ಪ್ರಕರಣ ದಾಖಲಿಸುವ ಮೂಲಕ ಬಿಜೆಪಿಯನ್ನು ಬೆದರಿಸುವ ಯತ್ನ ಫಲಿಸುವುದಿಲ್ಲ. ಮುಂದೆಯೂ ರಾಹುಲ್ ಗಾಂಧಿ ವಿರುದ್ಧ ಮಾತನಾಡಲು ಹಿಂಜರಿಯುವುದಿಲ್ಲ," ಎಂದು ಗುಡುಗಿದ್ದಾರೆ.

"ಪ್ರಧಾನಿ ವಿರುದ್ಧ ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಅತ್ಯಂತ ಕೀಳುಮಟ್ಟದ ಹೇಳಿಕೆಗಳನ್ನು ನೀಡಿದ್ದಾರೆ. ಆದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸದ ಪೊಲೀಸರು, ಕೇವಲ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಬೆದರಿಸಲು ಯತ್ನಿಸುತ್ತಿರುವುದು ಹಾಸ್ಯಾಸ್ಪದ," ಎಂದು ಶ್ರೀಕಾಂತ್ ಟೀಕಿಸಿದ್ದಾರೆ.

ಅಕ್ಟೋಬರ್ 14ರಂದು ಕಣ್ಣೂರಿನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿ ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕಣ್ಣೂರು ನಗರ ಠಾಣೆ ಪೊಲೀಸರು ಶ್ರೀಕಾಂತ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries