HEALTH TIPS

ಜಿಲ್ಲಾ ಮಟ್ಟದ ಪೋಷಣ್ ಮಾಸ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

ಕಾಸರಗೋಡು: ಮಕ್ಕಳು ಹಾಗೂ ಮಹಿಳೆಯರಲ್ಲಿ ಪೌಷ್ಟಿಕಾಂಶದ ಕೊರತೆಯನ್ನು ನಿವಾರಿಸಿ ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸುವ ಉದ್ದೇಶದಿಂದ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ, ಜಿಲ್ಲಾ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ಘಟಕದ ವತಿಯಿಂದ ಪೆÇೀಷಣ್ ಮಾಸ ಅಭಿಯಾನದ ಜಿಲ್ಲಾಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 


ಜಿಲ್ಲಾಧಿಕಾರಿ ಧನ್ಯಾ ಸುರೇಶ್ ಸಮಾರಂಭ ಉದ್ಘಾಟಿಸಿ ಮಾತನಾಡಿ, ಶಾಲೆಗಳ ಆಸುಪಾಸಿನ ಅಂಗಡಿಗಳಲ್ಲಿ ಪೌಷ್ಟಿಕ ಆಹಾರವನ್ನು ಉತ್ತೇಜಿಸುವ ಹಾಗೂ ಖಚಿತಪಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ನೇತೃತ್ವದಲ್ಲಿ ವಿಶೇಷ ಅಭಿಯಾನ ನಡೆಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

ನಾವು ಸೇವಿಸುವ ಆಹಾರದ ಬಗ್ಗೆ ಅರಿವು ಮೂಡಿಸುವ 'ನಿಮ್ಮ ಆಹಾರವನ್ನು ತಿಳಿದುಕೊಳ್ಳಿ' ಎಂಬ ಅಭಿಯಾನವನ್ನೂ ಆರಂಭಿಸಲಾಗುವುದು. ಆರೋಗ್ಯವಂತ ಪೀಳಿಗೆಯಿಂದ ಮಾತ್ರ ಆರೋಗ್ಯಕರ ದೇಶವನ್ನು ನಿರ್ಮಿಸಲು ಸಾಧ್ಯವಾಗುತ್ತದೆ. ಆಹಾರದ ಜೊತೆಗೆ ನಿಯಮಿತ ವ್ಯಾಯಾಮವನ್ನು ಜೀವನಶೈಲಿಯ ಭಾಗವಾಗಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕೆ.ಕೆ. ಸೋಯಾ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಹಿಳಾ ಮತ್ತು ಶಿಶು ಅಭಿವೃದ್ಧಿ ಅಧಿಕಾರಿ ವಿ.ಎ. ನಿಷಾಮೋಳ್, ಜಿಲ್ಲಾ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ಘಟಕದ ಕಾರ್ಯಕ್ರಮ ಅಧಿಕಾರಿ ಎ.ಕೆ. ಜೆಮ್ಮಾ ರಾಣಿ ಹಾಗೂ ಪೆÇೀಷಣ್ ಅಭಿಯಾನ ಜಿಲ್ಲಾ ಸಂಯೋಜಕ ವಿಪಿನ್ ಪವಿತ್ರನ್ ಉಪಸ್ಥಿತರಿದ್ದರು. ಡಾ. ಅಂಜಲಿ ಮೋಹನ್ ತರಗತಿ ನಡೆಸಿದರು. ಕಾರ್ಯಕ್ರಮದ ಅಂಗವಾಗಿ ವಿವಿಧ ಅಂಗನವಾಡಿಗಳ ನೇತೃತ್ವದಲ್ಲಿ ಪೌಷ್ಟಿಕ ಆಹಾರ ಪ್ರದರ್ಶನ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ರಕ್ತಹೀನತೆ ತಪಾಸಣೆಯನ್ನು ಆಯೋಜಿಸಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries