HEALTH TIPS

ಸ್ಮಿತ್ ಮಚ್ಚರ್ ಬಗ್ಗೆ ಇಡೀ ದೇಶವೇ ಹೆಮ್ಮೆಪಡುತ್ತಿದೆ: ರಾಷ್ಟ್ರಪತಿ ಮುರ್ಮು

ನವದೆಹಲಿ: ದುಬೈನಿಂದ ಇಸ್ರೇಲ್‌ಗೆ ತೆರಳುತ್ತಿದ್ದ 'ಫ್ಲೈ ದುಬೈ' ವಿಮಾನವನ್ನು ಪತನಗೊಳಿಸಲು ಸಹ-ಪೈಲಟ್ ನಡೆಸಿದ ಪ್ರಯತ್ನವನ್ನು ವಿಫಲಗೊಳಿಸಿದ ಕ್ಯಾಪ್ಟನ್ ಸ್ಮಿತ್ ಮಚ್ಚರ್‌ ಅವರ ಸಾಹಸಮಯ ಧೈರ್ಯ ಮತ್ತು ಸಮಯಪ್ರಜ್ಞೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ಲಾಘಿಸಿದ್ದಾರೆ.

'ಕ್ಯಾಪ್ಟನ್ ಸ್ಮಿತ್ ಮಚ್ಚರ್‌ ಅವರ ಬಗ್ಗೆ ಇಡೀ ದೇಶವೇ ಹೆಮ್ಮೆಪಡುತ್ತಿದೆ. ಅವರ ಧೈರ್ಯ ಮತ್ತು ಅದ್ಭುತ ಸಮಯಪ್ರಜ್ಞೆ ನಮ್ಮೆಲ್ಲರ ಹೃದಯವನ್ನು ತಟ್ಟಿದೆ' ಎಂದು ದ್ರೌಪದಿ ಮುರ್ಮು 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

'ಅತ್ಯಂತ ಅಪಾಯಕಾರಿ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರೂ ಸ್ಮಿತ್ ಅವರು ಪ್ರಯಾಣಿಕರ ಪ್ರಾಣವನ್ನು ರಕ್ಷಿಸುವ ದೃಢಸಂಕಲ್ಪ ಹೊಂದಿದ್ದರು. ಸ್ಮಿತ್ ಅವರ ಧೈರ್ಯ ಮತ್ತು ಅದ್ಭುತ ಸಮಯಪ್ರಜ್ಞೆಯು ಸಂಭವಿಸಬಹುದಾದ ದೊಡ್ಡ ದುರಂತವೊಂದನ್ನು ತಪ್ಪಿಸಲು ಮತ್ತು ಅನೇಕ ಜೀವಗಳನ್ನು ಉಳಿಸಲು ನೆರವಾಯಿತು' ಎಂದು ತಿಳಿಸಿದ್ದಾರೆ.

'ಸ್ಮಿತ್ ಅವರ ಅದಮ್ಯ ಉತ್ಸಾಹಕ್ಕೆ ನಾನು ನಮಿಸುತ್ತೇನೆ. ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಮತ್ತು ಉತ್ತಮ ಆರೋಗ್ಯವನ್ನು ಹೊಂದಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries