HEALTH TIPS

ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದ ರಸ್ತೆಯಲ್ಲಿ ವಾಹನ ಸಂಚಾರ: ರಸ್ತೆ ಹಾಳುಗೆಡವಿದ ಕಿಡಿಗೇಡಿಗಳು

ಕಾಮಗಾರಿ ತಡೆಗಳನ್ನು ತೆರವುಗೊಳಿಸಿ ಆಟೋರಿಕ್ಷಾ, ಇನ್ನೋವಾ ಕಾರು ಸಂಚಾರ; ಕಠಿಣ ಕ್ರಮಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಆಗ್ರಹ

ಮಂಜೇಶ್ವರ: ಕಾಸರಗೋಡು ಜಿಲ್ಲಾ ಪಂಚಾಯತಿ ನಿಧಿಯಿಂದ 20 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟೀಕರಣಗೊಳ್ಳುತ್ತಿರುವ ವರ್ಕಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪೆರ್ಮನಂಜಿ-ಮುಡಿಮಾರು ರಸ್ತೆಯಲ್ಲಿ ವಾಹನಗಳನ್ನು ಚಲಾಯಿಸಿ ಕಾಮಗಾರಿಯನ್ನು ಹಾಳುಗೆಡವಿದ ಘಟನೆ ನಡೆದಿದೆ.


ಅಕ್ಟೋಬರ್ 14ರ ಬುಧವಾರ ರಾತ್ರಿ ಸುಮಾರು 8 ಗಂಟೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ತಡೆಯಲು ಅಳವಡಿಸಲಾಗಿದ್ದ ತಡೆಗಳನ್ನು ತೆರವುಗೊಳಿಸಿದ ಕಿಡಿಗೇಡಿಗಳು, ಆಟೋರಿಕ್ಷಾ ಹಾಗೂ ಇನ್ನೋವಾ ಕಾರನ್ನು ರಸ್ತೆಯ ಮೇಲೆಯೇ ಚಲಾಯಿಸಿದ್ದಾರೆ. ಇದರಿಂದ ಹೊಸದಾಗಿ ಹಾಕಲಾಗುತ್ತಿದ್ದ ಕಾಂಕ್ರೀಟ್ ರಸ್ತೆಗೆ ಹಾನಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಈ ರಸ್ತೆಯಲ್ಲಿ ಕಾಂಕ್ರೀಟೀಕರಣ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಪೂರ್ಣಗೊಳ್ಳುವವರೆಗೆ ವಾಹನ ಸಂಚಾರ ಮಾಡದಂತೆ ತಡೆಗೋಡೆಗಳನ್ನು ನಿರ್ಮಿಸಲಾಗಿತ್ತು. ಅಲ್ಲದೆ, ವಾಹನ ಸಂಚಾರ ನಿಷೇಧಿಸುವ ಸೂಚನಾ ಫಲಕವನ್ನೂ ಅಳವಡಿಸಲಾಗಿತ್ತು. ಆದರೂ ತಡೆಗಳನ್ನು ತೆರವುಗೊಳಿಸಿ ವಾಹನಗಳನ್ನು ಚಲಾಯಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.


ಘಟನೆಗೆ ಸಂಬಂಧಿಸಿದಂತೆ ಪೆÇಲೀಸ್ ಅಧಿಕಾರಿಗಳು ಹಾಗೂ ಉನ್ನತಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಕಾಸರಗೋಡು ಜಿಲ್ಲಾ ಪಂಚಾಯತಿ ಸದಸ್ಯ ಹರ್ಷಾದ್ ವರ್ಕಾಡಿ ತಿಳಿಸಿದ್ದಾರೆ.

ಆರೋಪಿಗಳನ್ನು ತಕ್ಷಣ ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಸರಗೋಡು ಜಿಲ್ಲಾ ಪಂಚಾಯತಿ ಅಧ್ಯಕ್ಷ ಸಾಬು ಅಬ್ರಹಾಂ ಆಗ್ರಹಿಸಿದ್ದಾರೆ. ಸಾರ್ವಜನಿಕರ ಹಣದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆಯನ್ನು ಉದ್ದೇಶಪೂರ್ವಕವಾಗಿ ಹಾಳುಗೆಡವಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯವೂ ಕೇಳಿಬಂದಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries