ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಕಡೆಗೆ ತೆರಳುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಮಂದಿ ವಿರೋಧ ಪಕ್ಷದ ನಾಯಕರನ್ನು ದೆಹಲಿ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.
ಈ ಮಧ್ಯೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಜ್ಞಾನೇಶ್ ರಾಜೀನಾಮೆ ನೀಡುವವರೆಗೂ ನಮ್ಮ ಪ್ರತಿಭಟನೆ ಮುಂದುವರಿಯಲಿದೆ. ಇದು ದೇಶದ ಅತ್ಯಂತ ಪವಿತ್ರವಾದ ವ್ಯವಸ್ಥೆಯನ್ನು ರಕ್ಷಿಸಲು ನಡೆಯುತ್ತಿರುವ ಹೋರಾಟ ಎಂದು ಉಲ್ಲೇಖಿಸಿದ್ದಾರೆ.
ನಮ್ಮನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸವಾಲು ಹಾಕಿದ್ದಾರೆ.
We are not going to stop protesting till Gyanesh Kumar resigns.
This is a fight to protect the most sacred thing in this country.
There is nothing that Narendra Modi and Amit Shah can do that will stop us.


