HEALTH TIPS

ಜಮ್ಮು-ಕಾಶ್ಮೀರ ಕುರಿತು ಒಐಸಿ ನಿರ್ಣಯ ತಿರಸ್ಕರಿಸಿದ ಭಾರತ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಸ್ಥಿತಿಗತಿಯ ಕುರಿತು ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ಅಂಗೀಕರಿಸಿರುವ ನಿರ್ಣಯವನ್ನು ಭಾರತ ಸೋಮವಾರ ಸಾರಾಸಗಟಾಗಿ ತಿರಸ್ಕರಿಸಿದೆ.


ಪಾಕಿಸ್ತಾನವು ತನ್ನ ಮತಾಂಧ ಕಾರ್ಯಸೂಚಿಯನ್ನು ಜಾರಿಗೆ ತರಲು ಒಐಸಿ ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳಲು ಸಂಘಟನೆಯು ಅವಕಾಶ ಮಾಡಿಕೊಟ್ಟಿದೆ ಎಂದು ಭಾರತ ತೀವ್ರ ತರಾಟೆಗೆ ತೆಗೆದುಕೊಂಡಿದೆ. 

ಒಐಸಿ ವಿದೇಶಾಂಗ ಸಚಿವರ ಮಂಡಳಿ ಸಭೆಯು ಅಕ್ಟೋಬರ್ 17 ಮತ್ತು 18ರಂದು ಬಾಗ್ದಾದ್‌ನಲ್ಲಿ ನಡೆದಿತ್ತು. ಅದರಲ್ಲಿ ಕೈಗೊಳ್ಳಲಾದ ನಿರ್ಣಯದಲ್ಲಿ ಭಾರತದ ವಿರುದ್ಧ ಮಾಡಲಾದ ಉಲ್ಲೇಖಗಳನ್ನು ಸಾರಾಸಗಟಾಗಿ ತಿರಸ್ಕರಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಸ್ಪಷ್ಟಪಡಿಸಿದೆ.

ಭಾರತದ ವಿರುದ್ಧದ ಉಲ್ಲೇಖಗಳು ದುರುದ್ದೇಶಪೂರಿತ, ಪಕ್ಷಪಾತ ಹಾಗೂ ಸುಳ್ಳುಗಳಿಂದ ಕೂಡಿದೆ ಎಂದು ಹೇಳಿದೆ.

ಇದೇ ಸಂದರ್ಭದಲ್ಲಿ ದೇಶದ ಆಂತರಿಕ ವಿಚಾರಗಳ ಕುರಿತು ಪ್ರತಿಕ್ರಿಯಿಸಲು ಒಐಸಿಗೆ ಯಾವುದೇ ಅಧಿಕಾರವಿಲ್ಲ ಎಂದು ಭಾರತ ಖಡಕ್ ಸಂದೇಶ ರವಾನಿಸಿದೆ.

ಜಮ್ಮು-ಕಾಶ್ಮೀರ ಮತ್ತು ಲಡಾಕ್ ಕೇಂದ್ರಾಡಳಿತ ಪ್ರದೇಶಗಳು ಭಾರತದ ಅವಿಭಾಜ್ಯ ಮತ್ತು ಪತ್ಯೇಕಿಸಲಾಗದ ಭಾಗವಾಗಿದೆ. ರಾಜಕೀಯ ಪ್ರೇರಿತ ಅಪಪ್ರಚಾರಗಳಿಂದ ಈ ವಾಸ್ತವವನ್ನು ಎಂದಿಗೂ ಮರೆಮಾಚಲು ಸಾಧ್ಯವಿಲ್ಲ ಎಂದಿದೆ.


Our statement on anti-India references at the Organization of Islamic Cooperation (OIC) Council of Foreign Ministers’ Meeting in Baghdad ⬇️ 🔗 bit.ly/4juVp8y




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries