HEALTH TIPS

CEC ಮನೆ ಗೇಟ್ ಮೇಲೆ 'ಗದ್ದರ್ ಜ್ಞಾನೇಶ್' ಬರಹ: 20 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೊಲೆ ಯತ್ನ ಕೇಸ್; 6 ಮಂದಿ ಬಂಧನ!

ನವದೆಹಲಿ: ಎಸ್​ಐಆರ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯುಕ್ತ(ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧ ವಿರೋಧ ಪಕ್ಷಗಳು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಅವರ ಮನೆಯ ಗೋಡೆಯ ಮೇಲೆ ಗದ್ದಾರ್ ಜ್ಞಾನೇಶ್ ಎಂಬ ಬರಹ ಬರೆಯಲಾಗಿದೆ.


ಪ್ರತಿಭಟನೆಯ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರ ನಿವಾಸವನ್ನು ವಿರೂಪಗೊಳಿಸಿದ ಆರೋಪದ ಮೇಲೆ 20 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೊಲೆ ಯತ್ನ, ಸ್ವಯಂಪ್ರೇರಣೆಯಿಂದ ತೀವ್ರ ಗಾಯಗೊಳಿಸುವುದು ಮತ್ತು ಗಲಭೆ ಉಂಟುಮಾಡುವುದು ಸೇರಿದಂತೆ ವಿವಿಧ ಸೆಕ್ಷನ್​​ಗಳ ಅಡಿ ಎಫ್​ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ಬುಧವಾರ ತಿಳಿಸಿವೆ.

ಈ ಸಂಬಂಧ ಇಬ್ಬರು ಕಾಂಗ್ರೆಸ್ ನಾಯಕರು ಸೇರಿದಂತೆ ಆರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿಯ ವಿಜಯನಗರ ಪ್ರದೇಶದಲ್ಲಿರುವ ಕುಮಾರ್ ಅವರ ನಿವಾಸದ ಹೊರಗೆ ಸೋಮವಾರ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಕಾರ್ಯಕರ್ತರು, ಗೋಡೆ ಮೇಲೆ ಗದ್ದಾರ್ ಜ್ಞಾನೇಶ್(ದೇಶದ್ರೋಹಿ ಜ್ಞಾನೇಶ್) ಎಂದು ವಿವಾದಾತ್ಮಕವಾಗಿ ಬರೆದಿದ್ದರು.

ಪ್ರತಿಭಟನೆಯ ನಂತರ ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಿಂದ ಹೊರಡುವ ಮೊದಲು ಮನೆಯ ಗೇಟ್ ಮತ್ತು ಗೋಡೆಯ ಮೇಲೆ ಕಪ್ಪು ಬಣ್ಣದಲ್ಲಿ ಗದ್ದಾರ್ ಜ್ಞಾನೇಶ್ ಎಂದು ಬರೆದಿದ್ದಾರೆ ಎಂದು ಆರೋಪಿಸಲಾಗಿದೆ.

ಕಾಂಗ್ರೆಸ್ ನಾಯಕರಾದ ಅನಿಲ್ ಯಾದವ್, ಮುಖೇಶ್ ಧಂಗರ್, ಮನೋಜ್ ಗೌರ್, ರಾಜೇಶ್ ಕುಮಾರ್, ರಾಜಾ ಗೌತಮ್ ಮತ್ತು ಪಂಕಜ್ ಚೌಧರಿ ಅವರನ್ನು ಮಂಗಳವಾರ ಬಂಧಿಸಿ, ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಸಬ್-ಇನ್ಸ್‌ಪೆಕ್ಟರ್ ಗೌರವ್ ಗುಪ್ತಾ ಸಲ್ಲಿಸಿದ ಲಿಖಿತ ದೂರಿನ ಆಧಾರದ ಮೇಲೆ ಹರಿಪರ್ವತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಎಂಟು ಜನರ ಹೆಸರು ಮತ್ತು 15–20 ಗುರುತಿಸಲಾಗದ ಕಾಂಗ್ರೆಸ್ ಕಾರ್ಯಕರ್ತರನ್ನು ಹೆಸರಿಸಲಾಗಿದೆ.

ಎಫ್​ಐಆರ್ ಕುರಿತಂತೆ ಕಾಂಗ್ರೆಸ್ ನಗರ ಅಧ್ಯಕ್ಷ ಅಮಿತ್ ಸಿಂಗ್ ಪ್ರತಿಕ್ರಿಯಿಸಿದ್ದು, ಪ್ರತಿಭಟನೆಗೆ ಸಂಬಂಧಿಸಿದ ಸೆಕ್ಷನ್​ಗಳಡಿ ಪ್ರಕರಣವನ್ನು ಸೀಮಿತಗೊಳಿಸಬೇಕಿತ್ತು. ಆದರೆ ಪೊಲೀಸರು ಕಾರ್ಯಕರ್ತರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿದ್ದಾರೆ. ಈ ಸಂಬಂಧ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಸುಳ್ಳು ಆರೋಪಗಳನ್ನು ಹಿಂಪಡೆಯುವಂತೆ ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ.








 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries