HEALTH TIPS

CJP ಪ್ರತಿಭಟನೆ | ದಿಲ್ಲಿಯಲ್ಲಿ 23 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ

 ನವದೆಹಲಿ:  ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಅಕ್ಟೋಬರ್ 10ರಂದು ಹಮ್ಮಿಕೊಂಡಿರುವ ದೇಶ ವ್ಯಾಪಿ ಪ್ರತಿಭಟನೆಗೆ ದಿಲ್ಲಿ ಸಜ್ಜಾಗುತ್ತಿದೆ. ಅಧಿಕಾರಿಗಳು ಬಿಗಿ ಭದ್ರತೆ ಏರ್ಪಡಿಸಿದ್ದಾರೆ. ಅಲ್ಲದೆ ನೆರೆ ಹೊರೆಯ ರಾಜ್ಯಗಳಿಗೆ ಎಚ್ಚರದಿಂದಿರುವಂತೆ ಸೂಚಿಸಿದ್ದಾರೆ.


ಮೂಲಗಳ ಪ್ರಕಾರ, ಹೊಸದಿಲ್ಲಿಯಲ್ಲಿ ಒಟ್ಟು 23,000 ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್)ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ದಿಲ್ಲಿ ಪೊಲೀಸರಿಗೆ ನೀಡಲಾದ ಹೆಚ್ಚುವರಿಗೆ 110 ಸಿಎಪಿಎಫ್ ಕಂಪೆನಿಗಳ ಹೊರತಾಗಿ ಅಕ್ಟೋಬರ್ 8ರಿಂದ 12ರ ನಡುವೆ 221 ಸಿಎಪಿಎಫ್ ಕಂಪೆನಿಗಳನ್ನು ನಿಯೋಜಿಸಲು ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ. ಇವುಗಳಲ್ಲಿ 85 ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಕಂಪೆನಿಗಳು, 10 ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ), ಏಳು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ), ಏಳು ಕ್ಷಿಪ್ರ ಕಾರ್ಯಪಡೆ (ಆರ್‌ಎಎಫ್) ಮತ್ತು ಒಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಕಂಪೆನಿ ಸೇರಿವೆ. ಇದರ ಜೊತೆಗೆ ಪ್ರತಿಭಟನೆಯ ಸಂದರ್ಭ 20,000 ದಿಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.

ಜಂತರ್ ಮಂತರ್‌ನಲ್ಲಿ ಜುಲೈಯಲ್ಲಿ ನಡೆದ ಸಿಜೆಪಿ ಪ್ರತಿಭಟನೆಯಲ್ಲಿ ಸುಮಾರು 150 ಸಿಎಪಿಎಫ್ ಕಂಪೆನಿಗಳನ್ನು ನಿಯೋಜಿಸಲಾಗಿತ್ತು. ಅದೇ ರೀತಿ ರೈತರ ಪ್ರತಿಭಟನೆಯ ಸಂದರ್ಭ 93 ಕಂಪೆನಿಗಳನ್ನು ನಿಯೋಜಿಸಲಾಗಿತ್ತು. ದಿಲ್ಲಿಯ ಎಲ್ಲಾ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಇರಲಿದೆ ಎಂದು ಮೂಲಗಳು ತಿಳಿಸಿವೆ.

ಪೊಲೀಸರು ಹೊಸದಿಲ್ಲಿಯ ಎಲ್ಲಾ ಮೆಟ್ರೋ ನಿಲ್ದಾಣಗಳನ್ನು ಮುಚ್ಚುವ ಸಾಧ್ಯತೆ ಇದೆ. ಅಗತ್ಯ ಬಿದ್ದರೆ ಮಾರುಕಟ್ಟೆಗಳನ್ನು ಕೂಡ ಮುಚ್ಚಬಹುದು ಎಂದು ಮೂಲಗಳು ತಿಳಿಸಿವೆ.

ಬಹು ಹಂತದ ಬ್ಯಾರಿಕೇಡ್‌ಗಳನ್ನು ಕೂಡ ಅಳವಡಿಸಲಾಗುವುದು ಮತ್ತು ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿಯಂತ್ರಣ ಕೊಠಡಿಯಿಂದ ಮೇಲ್ವಿಚಾರಣೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ಹೊಸದಿಲ್ಲಿಯಾದ್ಯಂತ ಮುಖ ಚರ್ಯೆ ಗುರುತಿಸುವ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಲು ತುರ್ತು ಆದೇಶಗಳನ್ನು ಹೊರಡಿಸಲು ಎಕ್ಸಿಕ್ಯುಟಿವ್ ಮ್ಯಾಜಿಸ್ಟ್ರೇಟ್‌ಗೆ ಅಧಿಕಾರ ನೀಡುವ ಬಿಎನ್‌ಎಸ್‌ಎಸ್ 163 ಕೂಡ ಜಾರಿಯಲ್ಲಿರುತ್ತದೆ. ಯಾವುದೇ ಪ್ರತಿಭಟನೆ ಅಥವಾ ಜನರ ಗುಂಪುಗೂಡುವಿಕೆಗೆ ಅವಕಾಶ ನೀಡಲಾಗುವುದಿಲ್ಲ ಮತ್ತು ರೈಲ್ವೇ ನಿಲ್ದಾಣಗಳು ಹಾಗೂ ಬಸ್ ಟರ್ಮಿನಲ್‌ಗಳು ಕೂಡ ಕಣ್ಗಾವಲಿನಲ್ಲಿರುತ್ತವೆ. ಉತ್ತರಪ್ರದೇಶ ಮತ್ತು ಹರಿಯಾಣ ಸೇರಿದಂತೆ ಎಲ್ಲಾ ನೆರೆಯ ರಾಜ್ಯಗಳಿಗೆ ಪ್ರತಿಭಟನೆಯ ಸಂದರ್ಭ ಜಾಗರೂಕರಾಗಿರಲು ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಿಜೆಪಿ ವಕ್ತಾರ ಗೌರವ ದಾಸ್ ಅವರು ಬುಧವಾರ ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಚುನಾವಣಾ ಆಯೋಗ ಮುಖ್ಯಸ್ಥರನ್ನು ಗುರಿಯಾಗಿರಿಸಿಕೊಂಡು ದೇಶವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದರು. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಉದ್ದೇಶಿತ ಪ್ರತಿಭಟನೆಯ ಬಗ್ಗೆ ದಿಲ್ಲಿ ಪೊಲೀಸರಿಗೆ ಅಧಿಕೃತವಾಗಿ ಮಾಹಿತಿ ನೀಡುವುದಾಗಿ ಮತ್ತು ಭದ್ರತೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರಕ್ಕೆ ಸಂಬಂಧಿಸಿದ ವ್ಯವಸ್ಥೆಗಳಲ್ಲಿ ಅಧಿಕಾರಿಗಳಿಗೆ ಸಹಕರಿಸುವುದಾಗಿ ತಿಳಿಸಿದರು.

ದಿಲ್ಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಇಂಡಿಯಾ ಒಕ್ಕೂಟದ ವ್ಯಾಪಕ ಪ್ರತಿಭಟನೆಯ ಮಧ್ಯೆ ಈ ಘೋಷಣೆೆ ಹೊರಬಿದ್ದಿದೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries