ನವದೆಹಲಿ: ಮುಂಬೈಯಲ್ಲಿ ಶುಕ್ರವಾರ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅಪ್ರಾಪ್ತರು ಪಾಲ್ಗೊಂಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ಶನಿವಾರ ನೋಟಿಸ್ ಜಾರಿ ಮಾಡಿದೆ.
ಪ್ರತಿಭಟನಕಾರರ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಂತೆ ತಡೆಯಲು ಪ್ರತಿಭಟನಾ ಸ್ಥಳದಲ್ಲಿ ಅಪ್ರಾಪ್ತರನ್ನು ಮುಂಚೂಣಿಯಲ್ಲಿ ನಿಲ್ಲಿಸಲಾಗಿತ್ತು ಎಂಬ ಆರೋಪದ ಕುರಿತು ಕೈಗೊಂಡ ಕ್ರಮಗಳ ವರದಿಯನ್ನು ಎನ್ಎಚ್ಆರ್ಸಿ ಕೋರಿದೆ.
ಸಿಜೆಪಿ ಮುಂಬೈಯ ಶಿವಾಜಿ ಪಾರ್ಕ್ನಲ್ಲಿ ಧರಣಿ ನಡೆಸಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿತ್ತು. ಈ ಧರಣಿಯಲ್ಲಿ ನಸೀರುದ್ದೀನ್ ಶಾ, ಶಬಾನಾ ಆಜ್ಮಿ, ವಿಶಾಲ್ ಭಾರದ್ವಾಜ್ ಮತ್ತು ವಿಶಾಲ್ ದದ್ಲಾನಿ ಮೊದಲಾದ ಜನಪ್ರಿಯ ವ್ಯಕ್ತಿಗಳು ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದರು.
ಮುಂಬೈ ಪೊಲೀಸರು ಅನುಮತಿ ನಿರಾಕರಿಸಿದ್ದರೂ ಈ ಪ್ರತಿಭಟನೆ ನಡೆದಿತ್ತು.

