HEALTH TIPS

CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಬಿಡುಗಡೆ; ಮತ್ತೊಂದು ಬಾಂಡ್‌ ಗೆ ಸಹಿ

 ನವದೆಹಲಿ: 'ಕಾಕ್ರೋಚ್ ಜನತಾ ಪಾರ್ಟಿ' (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದ್ದು, 50 ಸಾವಿರ ರೂ. ಮೌಲ್ಯದ ಮತ್ತೊಂದು ಬಾಂಡ್‌ ಗೆ ಸಹಿ ಹಾಕಿದ ಬಳಿಕ ಶನಿವಾರ ಬಿಡುಗಡೆ ಮಾಡಲಾಗಿದೆ.


ದಿಲ್ಲಿಯ ಕನ್ನಾಟ್ ಪ್ಲೇಸ್ ನ ಸೆಂಟ್ರಲ್ ಪಾರ್ಕ್ ನಲ್ಲಿ CJP ಆಯೋಜಿಸಿದ್ದ 'ಲೆಹ್ರಾ ದೋ ತಿರಂಗಾ' (ತ್ರಿವರ್ಣ ಧ್ವಜ ಹಾರಿಸಿ) ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಶುಕ್ರವಾರ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು.

ಅಕ್ಟೋಬರ್ 10ರಂದು ನೀಡಿದ್ದ ಶಾಂತಿ ಒಪ್ಪಂದವನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿ ಶನಿವಾರ ಬೆಳಿಗ್ಗೆ ಅವರನ್ನು ಬಂಧಿಸಲಾಗಿತ್ತು.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)ಯ ಸೆಕ್ಷನ್ 126 ಮತ್ತು 170ರ ಅಡಿಯಲ್ಲಿ ಕೈಗೊಂಡ ಹೊಸ ತಡೆಗಟ್ಟುವ ಕ್ರಮದ ಭಾಗವಾಗಿ ದೀಪ್ಕೆ ಅವರನ್ನು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (SEM) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಬಳಿಕ ಹೊಸ ಬಾಂಡ್‌ ಗೆ ಸಹಿ ಪಡೆದ ನಂತರ ಬಿಡುಗಡೆ ಮಾಡಲಾಗಿದೆ ಎಂದು ದಿಲ್ಲಿ ಪೊಲೀಸರು ತಿಳಿಸಿದ್ದಾರೆ.

ದೀಪ್ಕೆ ಬಂಧನದ ಕಾನೂನುಬದ್ಧತೆಯನ್ನು CJPಯ ಕಾನೂನು ವ್ಯವಹಾರಗಳ ಮುಖ್ಯಸ್ಥೆ ರತ್ನಾ ಸಿಂಗ್ ಪ್ರಶ್ನಿಸಿದ್ದಾರೆ. ಬಂಧನವು ಮೂಲಭೂತ ಹಕ್ಕುಗಳು ಮತ್ತು ಕಾನೂನು ಪ್ರಕ್ರಿಯೆಯ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ, ದೀಪ್ಕೆ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ SEM ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದ ರತ್ನಾ ಸಿಂಗ್, ಶಾಂತಿಯುತ ರಾಷ್ಟ್ರೀಯ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ನಾಗರಿಕರಿಗೆ ಕರೆ ನೀಡುವುದು ಹೇಗೆ ಅಪರಾಧವಾಗುತ್ತದೆ ಎಂದು ಪ್ರಶ್ನಿಸಿದ್ದರು. "ದೀಪ್ಕೆ ಅವರ ಬಂಧನ ಕಾನೂನುಬಾಹಿರ. ಅವರು ಕೇವಲ ತ್ರಿವರ್ಣ ಧ್ವಜ ಹಾರಿಸುವಂತೆ ಜನರಿಗೆ ಕರೆ ನೀಡಿದ್ದರು. ಇದರಲ್ಲಿ ಅಪರಾಧವೇನಿದೆ?" ಎಂದು ಅವರು ಕೇಳಿದ್ದರು.

ದೀಪ್ಕೆ ವಿರುದ್ಧ ಮತ್ತೊಂದು ತಡೆಗಟ್ಟುವ ಕ್ರಮ

ಕನ್ನಾಟ್ ಪ್ಲೇಸ್ ನ ಸೆಂಟ್ರಲ್ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯದಂತೆ ತಡೆಯಲು ಪೊಲೀಸರು ಶುಕ್ರವಾರ ದೀಪ್ಕೆ ಅವರನ್ನು ವಶಕ್ಕೆ ಪಡೆದಿದ್ದರು. ಮಧ್ಯ ದಿಲ್ಲಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಿಷೇಧಿಸುವ ಸಂಬಂಧ BNSSನ ಸೆಕ್ಷನ್ 163ರ ಅಡಿಯಲ್ಲಿ ಆದೇಶ ಜಾರಿಯಲ್ಲಿತ್ತು.

ಅಕ್ಟೋಬರ್ 10ರಂದು ದಿಲ್ಲಿ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗಿದ್ದ ದೀಪ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದು, ಒಂದು ವರ್ಷದವರೆಗೆ ಶಾಂತಿ ಕದಡುವುದಿಲ್ಲ ಎಂಬ ಮುಚ್ಚಳಿಕೆಗೆ ಸಹಿ ಪಡೆದಿದ್ದರು. ಶುಕ್ರವಾರದ ಘಟನೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಹೊಸದಾಗಿ ತಡೆಗಟ್ಟುವ ಕ್ರಮ ಕೈಗೊಳ್ಳಲಾಗಿದೆ.

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR)ಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ಪೊಲೀಸರ ಎಚ್ಚರಿಕೆಯ ನಡುವೆಯೂ ಜನರು ಗುಂಪುಗೂಡಿದ ಹಿನ್ನೆಲೆಯಲ್ಲಿ ಸುಮಾರು 150 ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದ್ದು, ನಿಷೇಧಾಜ್ಞೆ ಉಲ್ಲಂಘನೆಯ ಆರೋಪದಡಿ ಹಲವು FIRಗಳನ್ನು ದಾಖಲಿಸಲಾಗಿದೆ.

CJP ಕಾರ್ಯಕರ್ತರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರು ಜಂತರ್ ಮಂತರ್ ಪ್ರದೇಶ ಪ್ರವೇಶಿಸಲು ಯತ್ನಿಸಿದ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದಾರೆ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries