HEALTH TIPS

Delhi | ಉತ್ತರಾಖಂಡ ಭೂಕಂಪನದ ಬಳಿಕ ಬಿರುಕು; ನಾಲ್ಕಂತಸ್ತಿನ ಕಟ್ಟಡ ಕುಸಿತ, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ನವದೆಹಲಿ: ಈಶಾನ್ಯ ದಿಲ್ಲಿಯ ಸೀಮಾಪುರಿ ಪ್ರದೇಶದಲ್ಲಿ ಬುಧವಾರ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಆತಂಕ ವ್ಯಕ್ತವಾಗಿದೆ. ಇದುವರೆಗೆ ಎಂಟು ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ ಐವರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯರು ಹಾಗೂ ಕುಟುಂಬ ಸದಸ್ಯರು ತಿಳಿಸಿದ್ದಾರೆ.


ಸತ್ಯ ನಿಕೇತನದಲ್ಲಿ ನಡೆದ ಹಾಸ್ಟೆಲ್ ದುರಂತದಲ್ಲಿ ಏಳು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡು ಒಂದು ತಿಂಗಳು ಕಳೆದ ಬೆನ್ನಲ್ಲೇ ದಿಲ್ಲಿಯಲ್ಲಿ ಈ ಘಟನೆ ನಡೆದಿದೆ.

ದಿಲ್ಲಿ ಅಗ್ನಿಶಾಮಕ ದಳಕ್ಕೆ (DFS) ಮಧ್ಯಾಹ್ನ 3.30ರ ಸುಮಾರಿಗೆ ಕಟ್ಟಡ ಕುಸಿದಿರುವ ಬಗ್ಗೆ ಕರೆ ಬಂದಿದ್ದು, ಕೂಡಲೇ ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. 'ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವ ಸಂದರ್ಭದಲ್ಲೇ ಸ್ಥಳೀಯರು ನಾಲ್ಕರಿಂದ ಐದು ಮಂದಿಯನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ಸ್ಥಳೀಯ ನಿವಾಸಿಯೊಬ್ಬರು ತಿಳಿಸಿದ್ದಾರೆ.

'ಅರ್ಧ ಗಂಟೆಯ ಬಳಿಕ ಪೊಲೀಸರು ಬಂದರು. ಇನ್ನೂ ಒಂದು ಮಗು ಅವಶೇಷಗಳಡಿ ಸಿಲುಕಿಕೊಂಡಿದೆ. ಕೆಲವರನ್ನು ಸ್ಥಳೀಯರೇ ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ನಾನೇ ಸ್ವತಃ ಸಿಪಿಆರ್ (CPR) ನೀಡಿದ್ದೇನೆ. ಇಬ್ಬರು ಅಥವಾ ಮೂವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ' ಎಂದು ಅವರು ಹೇಳಿದ್ದಾರೆ.

ರಕ್ಷಣಾ ತಂಡಗಳು ಮತ್ತು ಆಂಬ್ಯುಲೆನ್ಸ್ಗಳು ಸುಗಮವಾಗಿ ಹಾಗೂ ವೇಗವಾಗಿ ಸಂಚರಿಸಲು ಅನುಕೂಲವಾಗುವಂತೆ ಸಾರ್ವಜನಿಕರು ಘಟನಾ ಪ್ರದೇಶಕ್ಕೆ ಭೇಟಿ ನೀಡುವುದನ್ನು ತಪ್ಪಿಸಬೇಕು ಎಂದು ದಿಲ್ಲಿ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

'ಸೀಮಾಪುರಿಯಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದಿದ್ದು, ರಕ್ಷಣಾ ತಂಡಗಳು ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿವೆ. ಸೀಮಾಪುರಿ ಗೋಲ್ ಚಕ್ಕರ್, ಡಿಎಲ್‌ಎಫ್ ಭೋಪೂರ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರಕ್ಕೆ ಅಡಚಣೆಯಾಗಿದೆ. ರಸ್ತೆಗಳು ಖಾಲಿಯಾಗಿದ್ದರೆ ಆಂಬ್ಯುಲೆನ್ಸ್ ಮತ್ತು ರಕ್ಷಣಾ ವಾಹನಗಳು ವೇಗವಾಗಿ ಸಾಗಲು ಸಾಧ್ಯವಾಗುತ್ತದೆ. ಸಾಧ್ಯವಾದರೆ ಈ ಪ್ರದೇಶಕ್ಕೆ ಬರುವುದನ್ನು ತಪ್ಪಿಸಿ. ಘಟನಾ ಸ್ಥಳದ ಬಳಿ ವಾಹನ ನಿಲ್ಲಿಸುವುದು, ಪಾರ್ಕ್ ಮಾಡುವುದು ಅಥವಾ ಗುಂಪುಗೂಡುವುದನ್ನು ಮಾಡಬೇಡಿ. ಸಂಚಾರ ಪೊಲೀಸರ ಸೂಚನೆಗಳನ್ನು ಪಾಲಿಸಿ' ಎಂದು ಪೊಲೀಸರು 'ಎಕ್ಸ್'ನಲ್ಲಿ (X) ಪೋಸ್ಟ್ ಮಾಡಿದ್ದಾರೆ.

ಮಂಗಳವಾರ ರಾತ್ರಿ ಉತ್ತರಾಖಂಡದಲ್ಲಿ ಸಂಭವಿಸಿದ ಭೂಕಂಪದ ಪರಿಣಾಮ ದಿಲ್ಲಿ-ಎನ್ಸಿಆರ್ (Delhi-NCR) ಪ್ರದೇಶದಲ್ಲೂ ಕಂಪನದ ಅನುಭವವಾಗಿತ್ತು. ಅದರ ಬಳಿಕ ಕಟ್ಟಡದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದವು ಎಂದು ಸ್ಥಳೀಯರು ಹೇಳಿದ್ದಾರೆ.

ಆದರೆ ಕಟ್ಟಡ ಕುಸಿತಕ್ಕೆ ಭೂಕಂಪವೇ ಕಾರಣವೇ ಎಂಬುದು ಇನ್ನೂ ಖಚಿತವಾಗಿಲ್ಲ. ಕಟ್ಟಡ ಕುಸಿತಕ್ಕೆ ನಿಖರವಾದ ಕಾರಣ ತನಿಖೆಯ ಬಳಿಕವಷ್ಟೇ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ರಕ್ಷಣಾ ತಂಡಗಳು ಅವಶೇಷಗಳನ್ನು ತೆರವುಗೊಳಿಸಿ, ಅವುಗಳಡಿ ಸಿಲುಕಿರುವವರಿಗಾಗಿ ಶೋಧ ನಡೆಸುತ್ತಿವೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries