HEALTH TIPS

ಮುಂಬೈ, ದಿಲ್ಲಿಗಳಲ್ಲಿ EC, SIR ವಿರುದ್ಧ ಪ್ರತಿಭಟನೆ

ನವದೆಹಲಿ: ಭಾರೀ ಪೊಲೀಸ್ ಬಂದೋಬಸ್ತ್ ನಡುವೆಯೇ ಚುನಾವಣಾ ಆಯೋಗದ (EC) ಕಾರ್ಯವೈಖರಿ ಮತ್ತು ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳನ್ನು ಖಂಡಿಸಿ ಶುಕ್ರವಾರ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ಹಾಗೂ ಇತರ ಸಾಮಾಜಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು.


ಇದೇ ವೇಳೆ ದಿಲ್ಲಿಯ ಜಂತರ್ ಮಂತರ್ ಬಳಿ ಎಸ್‌ಎಫ್‌ಐ ಮತ್ತು ಡಿವೈಎಫ್‌ಐ ಕಾರ್ಯಕರ್ತರು ಹಾಗೂ ಪ್ರತಿಪಕ್ಷಗಳ ನಾಯಕರು ಪ್ರತಿಭಟನೆ ನಡೆಸಿ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿದರು.

ಮುಂಬೈನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ CJP ವಕ್ತಾರ ಸೌರವ್ ದಾಸ್, ಕುಮಾರ್ ದೇಶದ್ರೋಹಿಯಾಗಿದ್ದು ನಿಜವಾದ ದೇಶವಿರೋಧಿಯಾಗಿದ್ದಾರೆ ಎಂದು ಆರೋಪಿಸಿ, ಪ್ರತಿಭಟನೆಯನ್ನು ಬೆಂಬಲಿಸುವಂತೆ ಮುಂಬೈ ಜನತೆಗೆ ಕರೆ ನೀಡಿದರು.

CJP ಆರೋಪಗಳಿಗೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಚುನಾವಣಾ ಆಯುಕ್ತರ ಪತ್ರಿಕಾಗೋಷ್ಠಿಯ ನಂತರ ವಿಪಕ್ಷಗಳ ಸುಳ್ಳು ನಿರೂಪಣೆಗಳು ಸಂಪೂರ್ಣವಾಗಿ ಬಯಲಾಗಿವೆ. ಆದರೂ ಈ ಸುಳ್ಳು ನಿರೂಪಣೆಗಳನ್ನು ಮುಂದಿಡುವ ಪ್ರಯತ್ನಗಳು ಈಗಲೂ ಮುಂದುವರಿದಿವೆ. ಇದು ಯಶಸ್ವಿಯಾಗುವುದಿಲ್ಲ ಎಂದು ಹೇಳಿದರು.

ದಿಲ್ಲಿಯಲ್ಲಿ ಪೊಲೀಸರ ಅನುಮತಿ ಇಲ್ಲದಿದ್ದರೂ ಹಾಗೂ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ನೂರಾರು ಯುವಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಜನರ ಮತಗಳನ್ನು ಅಳಿಸುವ ಕ್ರಿಮಿನಲ್ ಕೃತ್ಯ ಎಸಗಿರುವ ಕುಮಾರ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು, ಬಂಧಿಸಬೇಕು ಮತ್ತು SIR ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಮತ್ತು ಪಕ್ಷದ ಹಿರಿಯ ನಾಯಕಿ ಬೃಂದಾ ಕಾರಟ್ ಒತ್ತಾಯಿಸಿದರು.

ಆಪ್ ನಾಯಕರೂ ಪ್ರತಿಭಟನೆ ನಡೆಸಿ SIR ವಿರೋಧಿಸಿ ಮಧ್ಯ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಿದರು. ಪಕ್ಷದ ನಾಯಕರಾದ ಸೌರಭ್ ಭಾರದ್ವಾಜ್, ಅತಿಶಿ, ಸಂಜೀವ್ ಝಾ, ಕುಲದೀಪ್ ಕುಮಾರ್, ಸಾಮಾಜಿಕ ಹೋರಾಟಗಾರ ಯೋಗೇಂದ್ರ ಯಾದವ ಹಾಗೂ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಹಲವು ನಾಯಕರು ಸೇರಿದಂತೆ 700ಕ್ಕೂ ಅಧಿಕ ಜನರನ್ನು ದಿಲ್ಲಿ ಪೊಲೀಸರು ವಶಕ್ಕೆ ಪಡೆದರು.

ಯುವಕಾಂಗ್ರೆಸ್ ಕೂಡ ಪ್ರತಿಭಟನೆ ನಡೆಸಿ ರೈಸಿನಾ ರೋಡ್ ನ ತನ್ನ ಕಚೇರಿಯಿಂದ ಜಂತರ್ಮಂತರ್ ಗೆ ಜಾಥಾದಲ್ಲಿ ತೆರಳಂಲು ಪ್ರಯತ್ನಿಸಿದ್ದು, ಅದನ್ನು ಪೊಲೀಸರು ವಿಫಲಗೊಳಿಸಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪೊಲೀಸರು ಹಾಗೂ ಆರ್‌ಎಎಫ್ ಪಡೆಗಳನ್ನು ನಿಯೋಜಿಸಲಾಗಿತ್ತು. ಸುರಕ್ಷತಾ ಮುನ್ನೆಚ್ಚರಿಕೆಯಾಗಿ ದಿಲ್ಲಿ ಮೆಟ್ರೋ ರೈಲು ನಿಗಮವು ಜನಪಥ, ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಸೇರಿದಂತೆ 11 ಪ್ರಮುಖ ಮೆಟ್ರೋ ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ತಾತ್ಕಾಲಿಕವಾಗಿ ಮುಚ್ಚಿತ್ತು.

ಚುನಾವಣಾ ಆಯೋಗದ ವಿರುದ್ಧ ವಿರೋಧ ಪಕ್ಷಗಳ ಹೋರಾಟ ತೀವ್ರಗೊಳ್ಳಲಿದ್ದು, 'ಇಂಡಿಯಾ' ಮೈತ್ರಿಕೂಟವು ಅಕ್ಟೋಬರ್ 6ರಂದು ವಿವಿಧ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಾಗೂ ನವೆಂಬರ್ 1ರಂದು ದಿಲ್ಲಿಯಲ್ಲಿ ಬೃಹತ್ ರ್ಯಾಲಿಯನ್ನು ಆಯೋಜಿಸಲು ನಿರ್ಧರಿಸಿದೆ.

ಪೊಲೀಸರು ಮಹಿಳಾ ಪ್ರತಿಭಟನಾಕಾರರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಇದು ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯವನ್ನು ಉಳಿಸಲು ನಡೆಯುತ್ತಿರುವ ಹೋರಾಟವಾಗಿದ್ದು, ಯುವಜನರು ಇದನ್ನು ಸಂವಿಧಾನಾತ್ಮಕವಾಗಿ ಹಾಗೂ ಶಾಂತಿಯುತವಾಗಿ ಮುಂದುವರಿಸಬೇಕು ಎಂದು ಆಪ್ ದಿಲ್ಲಿ ಘಟಕದ ಅಧ್ಯಕ್ಷ ಸೌರಭ್ ಭಾರದ್ವಾಜ್ ಹೇಳಿದ್ದಾರೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries