HEALTH TIPS

ಚುನಾವಣಾ ಆಯೋಗ ECINet ಪೋರ್ಟಲ್‌ಗೆ EROಗಳಿಗೆ ಪ್ರವೇಶ ನಿರ್ಬಂಧಿಸಿದ್ದು ಪ್ರಧಾನಿ ಮೋದಿಗೆ ತಿಳಿದಿತ್ತು: ಕಾಂಗ್ರೆಸ್ ಆರೋಪ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಚುನಾವಣಾ ಆಯೋಗದ ಐಟಿ ವಿಭಾಗವು ಮತದಾರರ ನೋಂದಣಿ ಅಧಿಕಾರಿಗಳಿಗೆ (ಇಆರ್‌ಒ) 'ಇಸಿಐನೆಟ್' ಪೋರ್ಟಲ್‌ಗೆ ಪ್ರವೇಶವನ್ನು ನಿರ್ಬಂಧಿಸಿದ್ದು ತಿಳಿದಿತ್ತು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ. 


ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ನೀಡಿದ ದೂರು ಪ್ರಧಾನ ಮಂತ್ರಿಯವರ ಅಧೀನದಲ್ಲಿರುವ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ (ಡಿಒಪಿಟಿ) ತಲುಪಿತ್ತು. ಆದ್ದರಿಂದ ಪ್ರಧಾನಿಯವರ ನಿರ್ದೇಶನದಂತೆಯೇ ಈ ನಿರ್ಧಾರವನ್ನು ಕೈಗೊಂಡಿರಬಹುದು ಎಂದು ರಮೇಶ್ ಹೇಳಿದ್ದಾರೆ.

ಇಬ್ಬರು ಚುನಾವಣಾ ಆಯುಕ್ತರು ಜುಲೈನಲ್ಲಿ ಸಂಪುಟ ಕಾರ್ಯದರ್ಶಿಗೆ ಸಲ್ಲಿಸಿದ್ದ ದೂರಿನಲ್ಲಿ ಉಲ್ಲೇಖಿಸಿದ್ದ ಅಧಿಕಾರಿಯೊಬ್ಬರು ಚುನಾವಣಾ ಆಯೋಗದಲ್ಲಿ ಪ್ರಮುಖ ಹುದ್ದೆಯಲ್ಲೇ ಮುಂದುವರಿದಿದ್ದಾರೆ ಎಂಬ ಮಾಧ್ಯಮ ವರದಿಯನ್ನು ಅವರು ಬೆಟ್ಟು ಮಾಡಿದ್ದಾರೆ.

ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವ ಬದಲಿಗೆ ವಿವಾದಾತ್ಮಕ ಐಟಿ ವಿಭಾಗದ ಮೇಲ್ವಿಚಾರಣೆಯನ್ನು ಅವರಿಗೆ ನೀಡಲಾಗಿದೆ. ಈ ನಿರ್ಧಾರವು ಸೆಪ್ಟೆಂಬರ್ 26ರಂದು ಚುನಾವಣಾ ಆಯೋಗ ನೀಡಿದ ಪತ್ರಿಕಾ ಪ್ರಕಟಣೆಗೆ ವಿರುದ್ಧವಾಗಿದೆ ಎಂದು ಎಕ್ಸ್ ಪೋಸ್ಟ್‌ನಲ್ಲಿ ರಮೇಶ್ ಆಕ್ಷೇಪಿಸಿದ್ದಾರೆ.

ಐಟಿ ವಿಭಾಗದ ಮೇಲ್ವಿಚಾರಣೆಯನ್ನು ತೆಗೆದುಹಾಕಿ, ಪಾರದರ್ಶಕತೆ ಇಲ್ಲದೆ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ ಅಧಿಕಾರಿಯ ಆದೇಶದ ನಂತರವೇ ಸಂಪುಟ ಕಾರ್ಯದರ್ಶಿಗೆ ದೂರು ನೀಡಲಾಗಿತ್ತು ಎಂದು ರಮೇಶ್‌ ಹೇಳಿದ್ದಾರೆ.

ಐಟಿ ವಿಭಾಗವು ಇಆರ್‌ಒಗಳಿಗೆ 'ಇಸಿಐನೆಟ್'ಗೆ ಪ್ರವೇಶವನ್ನು ನಿರ್ಬಂಧಿಸುತ್ತಿದೆ ಮತ್ತು ಮತದಾರರ ಪಟ್ಟಿಗೆ ಹೆಸರುಗಳನ್ನು ಸೇರಿಸುವ ಹಾಗೂ ತೆಗೆದುಹಾಕುವ ಅವರ ಶಾಸನಬದ್ಧ ಅಧಿಕಾರವನ್ನು ಅತಿಕ್ರಮಿಸುತ್ತಿದೆ ಎಂದು ಇಬ್ಬರು ಆಯುಕ್ತರು ಕಳವಳ ವ್ಯಕ್ತಪಡಿಸಿದ್ದರು ಎಂದು ತಿಳಿಸಿರುವ ರಮೇಶ್‌, ಈ ಬೆಳವಣಿಗೆಯನ್ನು ಕಾಂಗ್ರೆಸ್‌ನ'ವೋಟ್ ಚೋರಿ' ಆರೋಪಗಳಿಗೆ ಮತ್ತೊಂದು ಸಾಕ್ಷಿಯಾಗಿದೆ ಎಂದು ಬಣ್ಣಿಸಿದ್ದಾರೆ. ವ್ಯವಸ್ಥೆಯ ಮೇಲೆ ಕೇಂದ್ರೀಕೃತ ನಿಯಂತ್ರಣ ಸಾಧಿಸಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಪ್ರಧಾನಿ ಮೋದಿ ಈ ಅಧಿಕಾರಿಯನ್ನು ಉಳಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries