HEALTH TIPS

ECINet ವಿಷಯದಲ್ಲಿ ಚುನಾವಣಾ ಆಯೋಗ ಸುಳ್ಳು ಹೇಳಿದೆ: ಕಾಂಗ್ರೆಸ್ ಗಂಭೀರ ಆರೋಪ

ನವದೆಹಲಿ:  'ECINet' ಪೋರ್ಟಲ್ ವಿಷಯದಲ್ಲಿ ಚುನಾವಣಾ ಆಯೋಗವು ಸಾರ್ವಜನಿಕರಿಗೆ ಸುಳ್ಳು ಹೇಳಿದೆ. ಪ್ರಜಾಪ್ರತಿನಿಧಿ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಸಂವಿಧಾನ ಉಲ್ಲಂಘನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದೆ.


ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, 'ಸೆಪ್ಟೆಂಬರ್ 26ರಂದು ಚುನಾವಣಾ ಆಯೋಗ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ECINet ಪೋರ್ಟಲ್ ಕಾನೂನಿಗೆ ಬದ್ಧವಾಗಿದೆ ಎಂದು ಪ್ರಮಾಣೀಕರಿಸಲು ಸಮಿತಿಯೊಂದನ್ನು ರಚಿಸುವುದಾಗಿ ಹೇಳಿತ್ತು. ಆದರೆ, ಜನವರಿ 22ರಂದು ಈ ಪೋರ್ಟಲ್ ಚಾಲನೆಗೆ ತಂದಾಗಲೇ ಇದು ಸಂಪೂರ್ಣವಾಗಿ ಕಾನೂನು ಮತ್ತು ಸಂವಿಧಾನಕ್ಕೆ ಬದ್ಧವಾಗಿದೆ' ಎಂದು ಆಯೋಗ ಭರವಸೆ ನೀಡಿತ್ತು. ಈಗ ನೋಡಿದರೆ ಆ ಮಾತೇ ಸುಳ್ಳಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮತದಾರರ ಪಟ್ಟಿಯ ಶಾಸನಬದ್ಧ ಅಧಿಕಾರ ಹೊಂದಿರುವ 'ಮತದಾರರ ನೋಂದಣಿ ಅಧಿಕಾರಿಗಳ' (ಇಆರ್‌ಒ) ಹಕ್ಕನ್ನು ಕಸಿದುಕೊಳ್ಳಲಾಗಿದೆ. ಗೋವಾ, ಪಶ್ಚಿಮ ಬಂಗಾಳ ಮುಂತಾದ ರಾಜ್ಯಗಳಲ್ಲಿ ಇಆರ್‌ಒಗಳ ನಿರ್ಧಾರವನ್ನು ಬದಿಗೊತ್ತಿ ಚುನಾವಣಾ ಆಯೋಗವೇ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಇದು ಕಾನೂನಿನ ಉಲ್ಲಂಘನೆಯಾಗಿದೆ ಎಂದಿದ್ದಾರೆ.

ಚುನಾವಣಾ ಅಕ್ರಮಗಳು ಮತ್ತು ಸಂವಿಧಾನ ಉಲ್ಲಂಘನೆಯನ್ನು ಖಂಡಿಸಿ 'ಇಂಡಿಯಾ' ಮೈತ್ರಿಕೂಟ, ನಾಗರಿಕರು ಹಾಗೂ ಇತರೆ ಸಂಸ್ಥೆಗಳು ಇಂದಿನಿಂದ ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿವೆ.

'ಪ್ರಜಾಪ್ರಭುತ್ವ ಉಳಿಸಿ' ಅಭಿಯಾನದ ಭಾಗವಾಗಿ ಅಕ್ಟೋಬರ್ 6ರಂದು ವಿಪಕ್ಷಗಳ ಎಲ್ಲಾ ಸಂಸದರು ಚುನಾವಣಾ ಆಯೋಗಕ್ಕೆ ಬೃಹತ್ ಮೆರವಣಿಗೆ ನಡೆಸಲಿದ್ದಾರೆ. ರಾಷ್ಟ್ರಪತಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದಾರೆ. ಮುಂಬರುವ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಮೂಲಕವೇ ನಡೆಸಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಒತ್ತಾಯಿಸಿವೆ.

ಆಯೋಗದ ಸ್ಪಷ್ಟನೆ

ಇನ್ನೊಂದೆಡೆ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಯುಕ್ತರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗ, ಸಂಸ್ಥೆಗಳಲ್ಲಿ ಭಿನ್ನ ಅಭಿಪ್ರಾಯಗಳು ಸಹಜ. ಆಯೋಗದ ಎಲ್ಲಾ ಆದೇಶಗಳು ಕಾನೂನುಬದ್ಧವಾಗಿಯೇ ಇರುತ್ತವೆ ಎಂದು ಸ್ಪಷ್ಟಪಡಿಸಿದೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries