HEALTH TIPS

ವಿದೇಶಿ ಗುಪ್ತಚರ ಏಜೆಂಟ್‌ ಗಳೊಂದಿಗೆ ಮಾಹಿತಿ ಹಂಚಿಕೆ ಆರೋಪ: ಸೇನಾಧಿಕಾರಿಯ ಪತ್ನಿ ವಿರುದ್ಧ FIR

 ಜಮ್ಮು: ವಿದೇಶಿ ಗುಪ್ತಚರ ಏಜೆಂಟ್‌ ಗಳೊಂದಿಗೆ ಸೂಕ್ಷ್ಮ ಮಾಹಿತಿ ಹಂಚಿಕೊಂಡಿರುವ ಆರೋಪದ ಮೇಲೆ ಸೇನಾಧಿಕಾರಿಯೊಬ್ಬರ ಪತ್ನಿ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ, ಮಹಿಳೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡಿರುವುದು ಇನ್ನೂ ದೃಢಪಟ್ಟಿಲ್ಲ.


ತೆಲಂಗಾಣ ಮೂಲದ ಮಹಿಳೆ ಪ್ರಸ್ತುತ ಜಮ್ಮುವಿನ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದಾರೆ. ಚೀನಾ ಸೇರಿದಂತೆ ವಿದೇಶಿ ಗುಪ್ತಚರ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳ ಜತೆ ಮಾಹಿತಿ ಹಂಚಿಕೊಂಡಿರುವ ಆರೋಪದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಿಳೆ ಸಂಶೋಧನೆಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಈ ಚಟುವಟಿಕೆಗಳ ಮೂಲಕ ವಿದೇಶಿ ವ್ಯಕ್ತಿಗಳೊಂದಿಗೆ ಯಾವುದೇ ಮಾಹಿತಿ ಅಥವಾ ದಾಖಲೆಗಳನ್ನು ಹಂಚಿಕೊಳ್ಳಲಾಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಮ್ಮುವಿನ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಅಧಿಕೃತ ರಹಸ್ಯ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪಿಗೆ ಲಭಿಸಿದ ಮಾಹಿತಿಯ ಆಧಾರದ ಮೇಲೆ ತನಿಖೆ ಆರಂಭಿಸಲಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಪೊಲೀಸ್ ವರಿಷ್ಠಾಧಿಕಾರಿ ದರ್ಜೆಯ ಅಧಿಕಾರಿಯೊಬ್ಬರು ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ.

ಮಹಿಳೆಯನ್ನು ಈವರೆಗೆ ಬಂಧಿಸಿಲ್ಲ. ಅವರ ವಿದೇಶಿ ಸಂಪರ್ಕಗಳು ಹಾಗೂ ಯಾವುದೇ ಸೂಕ್ಷ್ಮ ಮಾಹಿತಿ ಹಂಚಿಕೆಯಾಗಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ಪ್ರಕರಣದ ಕುರಿತು ಪೊಲೀಸರು ಅಥವಾ ಸೇನೆಯಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಸೇನೆಯ ಸಾರ್ವಜನಿಕ ಸಂಪರ್ಕಾಧಿಕಾರಿಯೂ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries