HEALTH TIPS

"ಡೆಹ್ರಾಡೂನ್‌ನಲ್ಲಿ ಅಡಗಿರುವ ಮಹಿಳೆ": INDIA ಬಣದ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಉಲ್ಲೇಖಿಸಿದ್ದು ಯಾರನ್ನು?

ನವದೆಹಲಿ: ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿ ಮೋದಿ, ಅಮಿತ್ ಶಾ, ಜ್ಞಾನೇಶ್ ಕುಮಾರ್ ಮತ್ತು ಪ್ರಸ್ತುತ ಡೆಹ್ರಾಡೂನ್‌ನಲ್ಲಿ ಅಡಗಿರುವ ಮಹಿಳೆ ಹಾಗೂ ಇತರರನ್ನು ನ್ಯಾಯದ ಕಟಕಟೆಗೆ ತರುವುದಾಗಿ ನಾವು ನಿಮಗೆ ಭರವಸೆ ನೀಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.


ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅಕ್ರಮಗಳ ಆರೋಪದ ವಿರುದ್ಧದ ಹೋರಾಟವನ್ನು ಮುಂದುವರಿಸಲು ಇಂಡಿಯಾ ಮೈತ್ರಿಕೂಟದ ನಾಯಕರು ಒಗ್ಗಟ್ಟಿನ ನಿರ್ಧಾರ ಕೈಗೊಂಡಿದ್ದಾರೆ ಎಂದು ಅವರು ಘೋಷಿಸಿದ್ದಾರೆ.

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಮೈತ್ರಿಕೂಟ ನಡೆಸಿದ ಪ್ರತಿಭಟನಾ ಮೆರವಣಿಗೆಯ ಮರುದಿನ ರಾಹುಲ್ ಗಾಂಧಿ ಅವರು ತಮ್ಮ ನಿವಾಸದಲ್ಲಿ ಪ್ರತಿಪಕ್ಷದ ನಾಯಕರಿಗೆ ಚಹಾ ಕೂಟವನ್ನು ಆಯೋಜಿಸಿದ್ದರು. ಸಭೆಯ ಬಳಿಕ ಇಂಡಿಯಾ ಮೈತ್ರಿಕೂಟದ ನಾಯಕರು ಪತ್ರಿಕಾಗೋಷ್ಠಿ ನಡೆಸಿದ್ದರು.

"ನಿನ್ನೆ ಇಲ್ಲಿ ನೀವು ಕಂಡದ್ದು, ಇಲ್ಲಿ ನಿಂತಿರುವ ರಾಜಕೀಯ ಪಕ್ಷದ ಅಭಿವ್ಯಕ್ತಿಯನ್ನಲ್ಲ; ಬದಲಾಗಿ ಭಾರತದ ಜನರ ಅಭಿವ್ಯಕ್ತಿಯಾಗಿತ್ತು. ನಡೆಯುತ್ತಿರುವ ಅನ್ಯಾಯದ ವಿರುದ್ಧ ನಮ್ಮೊಂದಿಗೆ ನಿಂತ ದಿಲ್ಲಿಯ ಜನರಿಗೆ ಹಾಗೂ ಭಾರತದ ಜನರಿಗೆ ನಾವು ಧನ್ಯವಾದ ಅರ್ಪಿಸಲು ಬಯಸುತ್ತೇವೆ. ಇದು ನಮ್ಮ ವಿಷಯವಲ್ಲ, ಇದು ಭಾರತದ ಜನರಿಗೆ ಸಂಬಂಧಿಸಿದ ವಿಷಯ "ಎಂದು ರಾಹುಲ್ ಗಾಂಧಿ ಹೇಳಿದ್ದರು.

ಆದರೆ, ರಾಹುಲ್ ಗಾಂಧಿ ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿದ 'ಪ್ರಸ್ತುತ ಡೆಹ್ರಾಡೂನ್‌ನಲ್ಲಿ ಅಡಗಿರುವ ಮಹಿಳೆ' ಯಾರು? ಎಂಬುದು ಸ್ಪಷ್ಟವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷದ ನಾಯಕರು ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ. ಆದರೆ, ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಅವರು 'ಡೆಹ್ರಾಡೂನ್‌ನಲ್ಲಿ ಅಡಗಿರುವ ಮಹಿಳೆ' ಎಂದು ಉಲ್ಲೇಖಿಸಿದ್ದು ಯಾರನ್ನು ಎಂಬುದು ನಿಗೂಢವಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಉಲ್ಲೇಖಿಸಿದ ಮಹಿಳೆ ಚುನಾವಣಾ ಆಯೋಗದ ಮಹಾನಿರ್ದೇಶಕಿ ಸೀಮಾ ಖನ್ನಾ ಅವರಾ? ಮತಗಳ್ಳತನದ ಆರೋಪಗಳಲ್ಲಿ ಅವರ ಹೆಸರೂ ಕೇಳಿಬಂದಿದೆ.

ಖನ್ನಾ ಅವರೇ ರಾಹುಲ್ ಗಾಂಧಿ ಉಲ್ಲೇಖಿಸಿದ ಮಹಿಳೆ ಎಂಬುದಕ್ಕೆ ಯಾವುದೇ ದೃಢೀಕರಣವಿಲ್ಲ. ಕಾಂಗ್ರೆಸ್ ನಾಯಕರು ಅವರ ಹೆಸರನ್ನು ಪ್ರಸ್ತಾಪಿಸಿಲ್ಲ. ಅಲ್ಲದೆ, ಸೀಮಾ ಖನ್ನಾ ಅವರಿಗೆ ಡೆಹ್ರಾಡೂನ್ ಸಂಪರ್ಕವಿರುವ ಬಗ್ಗೆ ಮಾಹಿತಿಯಿಲ್ಲ ಎಂದು Times of India ವರದಿ ಮಾಡಿದೆ. 





 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries