HEALTH TIPS

ಜಂತರ್ ಮಂತರ್ ಪ್ರತಿಭಟನಾ ಸ್ಥಳವಾಗಿ ಉಳಿಯಲಿ: SFI, DYFI ಕಾರ್ಯಕರ್ತರ ಕೂಗು

ನವದೆಹಲಿ: ಸ್ಟೂಡೆಂಟ್‌ ಫೆಡರೇಷನ್‌ ಆಫ್‌ ಇಂಡಿಯಾ (ಎಸ್‌ಎಫ್‌ಐ), ಡೆಮಾಕ್ರಟಿಕ್‌ ಯೂತ್‌ ಫೆಡರೇಷನ್‌ ಆಫ್ ಇಂಡಿಯಾ (ಡಿವೈಎಫ್‌ಐ) ಕಾರ್ಯಕರ್ತರು ಫಿರೋಜ್‌ಶಾ ರಸ್ತೆಯಿಂದ ಜಂತರ್‌ ಮಂತರ್‌ನತ್ತ ಹೋಗಲು ಬುಧವಾರ ಪ್ರಯತ್ನಿಸಿದರು. ಆದರೆ, ಮುಂಜಾಗ್ರತೆಯಾಗಿ ಅಳವಡಿಸಲಾಗಿರುವ ಬ್ಯಾರಿಕೇಡ್‌ ಬಳಿಯೇ ಅವರನ್ನೆಲ್ಲ ತಡೆಯಲಾಯಿತು. 

ಜಂಟಿಯಾಗಿ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಎರಡೂ ಸಂಘಟನೆಗಳ ಕಾರ್ಯಕರ್ತರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರು ರಾಜೀನಾಮೆ ನೀಡಬೇಕು ಹಾಗೂ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆಗೆ ಅವಕಾಶ ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ಘೋಷಣೆ ಕೂಗಿದರು.

ದೆಹಲಿ ಪೊಲೀಸರು ಎರಡು ದಿನಗಳ ಹಿಂದಷ್ಟೇ ಜಂತರ್‌ ಮಂತರ್‌ ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಅಧಿಕೃತವಾಗಿ ಕೈಬಿಟ್ಟಿದ್ದಾರೆ.

ಎಸ್‌ಎಫ್‌ಐ ಹಾಗೂ ಡಿವೈಎಫ್‌ಐ ಕಾರ್ಯಕರ್ತರನ್ನು ಪೊಲೀಸರು ಫಿರೋಜ್‌ಶಾ ರಸ್ತೆಯಲ್ಲಿ ತಡೆದಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕಿನ ಮೇಲೆ ನಿರ್ಬಂಧಗಳನ್ನು ಹೇರುವ ಬಗ್ಗೆ ಕಳವಳ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ, ಜಂತರ್‌ ಮಂತರ್‌ ಅನ್ನು ಸಾರ್ವಜನಿಕ ಪ್ರತಿಭಟನಾ ಸ್ಥಳವನ್ನಾಗಿಯೇ ಉಳಿಸುವಂತೆ ಕೂಗೆದ್ದಿದೆ.

'ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಜಮಾಯಿಸುತ್ತಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳಲಿದೆ. ಜಂತರ್ ಮಂತರ್‌ ಅನ್ನು ಪ್ರತಿಭಟನಾ ಸ್ಥಳವಾಗಿ ಉಳಿಯುವಂತೆ ಮಾಡಲಾಗುವುದು' ಎಂದು ಸಂಘಟನೆಗಳ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries