ನವದೆಹಲಿ: ಹೊಸ ಮತದಾರರ ನೋಂದಣಿಗಾಗಿ ಪರಿಚಯಿಸಲಾದ ಹೊಸ ಫಾರ್ಮ್ 6 ಘೋಷಣೆಗೆ ಸುಪ್ರೀಂ ಕೋರ್ಟ್ ಅನುಮೋದನೆಯನ್ನೂ ನೀಡಿಲ್ಲ ಅಥವಾ ಅದನ್ನು ತಿರಸ್ಕರಿಸಿಯೂ ಇಲ್ಲ. ಅದರ ಸಿಂಧುತ್ವದ ಕುರಿತು ನ್ಯಾಯಾಲಯ ಇನ್ನು ತೀರ್ಪು ನೀಡಬೇಕಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಸ್ಪಷ್ಟಪಡಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಯಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೊಹನಾ ಅವರನ್ನೊಳಗೊಂಡ ಪೀಠವು ಭಾರತೀಯ ಚುನಾವಣಾ ಆಯೋಗಕ್ಕೆ ಸಂಬಂಧಿಸಿದಂತೆ ಪ್ರಿಯಾ ಮಿಶ್ರಾ ಎಂಬವರು ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ನಡೆಸುವ ಸಂದರ್ಭದಲ್ಲಿ ಈ ಮೌಖಿಕ ಹೇಳಿಕೆಗಳನ್ನು ನೀಡಿದೆ.
ಅರ್ಜಿದಾರರ ಪರ ವಕೀಲ ನರೇಂದ್ರ ಮಿಶ್ರಾ ಅವರು, ಹೊಸ ಫಾರ್ಮ್ 6 ಅನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ ಎಂಬ ಭಾರತೀಯ ಚುನಾವಣಾ ಆಯೋಗದ ವಾದವನ್ನು ಕಳೆದ ವಾರ ಮುಖ್ಯ ನ್ಯಾಯಮೂರ್ತಿಗಳು ತಳ್ಳಿಹಾಕಿದ್ದರು ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಈ ವೇಳೆ ನ್ಯಾಯಮೂರ್ತಿ ಬಾಗ್ಚಿ ಅವರು ಪ್ರತಿಕ್ರಿಯಿಸಿ, "ಹೊಸ ಫಾರ್ಮ್ 6ರ ಕುರಿತು ನ್ಯಾಯಾಲಯ ಯಾವುದೇ ತೀರ್ಪು ನೀಡಿಲ್ಲ ಎಂದು ಹೇಳಿದರು.



