HEALTH TIPS

Tamil Nadu | ಶಿಕ್ಷಣ ಇಲಾಖೆಯಲ್ಲಿ 100 ಕೋಟಿ ರೂ. ಹಗರಣ: ಮಾಜಿ ಸಚಿವ ಅನ್ಬಿಲ್ ಮಹೇಶ್ ಬಂಧನ

ಚೆನ್ನೈ: ಖಾಸಗಿ ಶಾಲೆಗಳಿಗೆ ಮಾನ್ಯತೆ ಹಾಗೂ ಇತರ ಶಾಸನಬದ್ಧ ಅನುಮತಿಗಳನ್ನು ಕೊಡಿಸುವುದಾಗಿ ಭರವಸೆ ನೀಡಿ 100 ಕೋಟಿ ರೂ.ಗೂ ಹೆಚ್ಚು ಹಣ ಸಂಗ್ರಹಿಸಿದ ಆರೋಪದಡಿ ತಮಿಳುನಾಡಿನ ಮಾಜಿ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೋಳಿ ಅವರನ್ನು ಚೆನ್ನೈನ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಸೋಮವಾರ ಬಂಧಿಸಿದ್ದಾರೆ. 


ಅನ್ಬಿಲ್ ಮಹೇಶ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ, ಅಮಿಂಜಿಕರೈನಲ್ಲಿರುವ ಅವರ ಅಪಾರ್ಟ್‌ಮೆಂಟ್‌ಗೆ ತೆರಳಿದ ಪೊಲೀಸರ ತಂಡ ಅವರನ್ನು ಬಂಧಿಸಿತು.

ತಮಿಳುನಾಡಿನ ಖಾಸಗಿ ಶಾಲೆಗಳ ಸಂಘಟನೆಗಳ ಮಹಾ ಒಕ್ಕೂಟದ ಕಾರ್ಯದರ್ಶಿ ಡಿ.ಸಿ. ಇಳಂಗೋವನ್ ನೀಡಿದ ದೂರಿನ ಆಧಾರದಲ್ಲಿ ಈ ಪ್ರಕರಣ ದಾಖಲಾಗಿದೆ.

ನೋಂದಣಿಯಾಗದ ತಮಿಳುನಾಡು ಖಾಸಗಿ ಶಾಲೆಗಳ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಅರಸುಕುಮಾರ್ ಮತ್ತು ಖಜಾಂಚಿ ಮುತ್ತುಕುಮಾರ್ ಅವರು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ 100 ಕೋಟಿ ರೂ.ಗೂ ಹೆಚ್ಚು ಹಣ ಸಂಗ್ರಹಿಸಿದ್ದಾರೆ ಎಂದು ಇಳಂಗೋವನ್ ಆರೋಪಿಸಿದ್ದಾರೆ.

ಖಾಸಗಿ ಶಾಲೆಗಳಿಗೆ ಶಾಶ್ವತ ಮಾನ್ಯತೆ ಕೊಡಿಸುವುದು, ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಸರಕಾರದ ಅನುಮತಿ ಪಡೆಯುವುದು ಹಾಗೂ ಪಟ್ಟಣ ಮತ್ತು ಪ್ರದೇಶ ಯೋಜನಾ ನಿರ್ದೇಶನಾಲಯದಿಂದ ಪರವಾನಗಿ ಸೇರಿದಂತೆ ಇತರ ಶಾಸನಬದ್ಧ ಅನುಮತಿಗಳನ್ನು ಕೊಡಿಸುವುದಾಗಿ ಆರೋಪಿಗಳು ಭರವಸೆ ನೀಡಿದ್ದರು. ಆಗ ಅಧಿಕಾರದಲ್ಲಿದ್ದ ಡಿಎಂಕೆ ಪಕ್ಷಕ್ಕೆ ದೇಣಿಗೆ ನೀಡುವ ನೆಪದಲ್ಲೂ ಹಣ ಸಂಗ್ರಹಿಸಲಾಗಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸರಕಾರದೊಂದಿಗೆ ಸಂಪರ್ಕವಿದ್ದು, ಅಗತ್ಯ ಅನುಮತಿಗಳನ್ನು ಕೊಡಿಸುವುದಾಗಿ ಅರಸುಕುಮಾರ್ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಗೆ ಭರವಸೆ ನೀಡಿದ್ದರು. ಆದರೆ, ಭರವಸೆಗಳನ್ನು ಈಡೇರಿಸದೆ, ಸಂಗ್ರಹಿಸಿದ ಹಣವನ್ನೂ ವಾಪಸು ನೀಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಅರಸುಕುಮಾರ್ ವಿರುದ್ಧ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಆರಂಭದಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಜೂನ್ 27ರಂದು ಅವರನ್ನು ಬಂಧಿಸಲಾಗಿತ್ತು.

ನಂತರದ ತನಿಖೆಯ ಆಧಾರದಲ್ಲಿ, ಆಗ ಶಾಲಾ ಶಿಕ್ಷಣ ಸಚಿವರಾಗಿದ್ದ ಅನ್ಬಿಲ್ ಮಹೇಶ್ ಅವರ ಪಾತ್ರದ ಬಗ್ಗೆಯೂ ಪೊಲೀಸರು ತನಿಖೆ ಕೈಗೊಂಡಿದ್ದರು.

ಸೆಪ್ಟೆಂಬರ್ 16ರಂದು ಚೆನ್ನೈ ಮತ್ತು ತಿರುಚ್ಚಿ ಸೇರಿದಂತೆ ಅನ್ಬಿಲ್ ಮಹೇಶ್ ಅವರಿಗೆ ಸಂಬಂಧಿಸಿದ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದ್ದ ಪೊಲೀಸರು, ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಸೆಪ್ಟೆಂಬರ್ 29ರಂದು ಕೂಡ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.

ಈ ನಡುವೆ, ಈ ಜಾಲಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (PMLA) ಜಾರಿ ನಿರ್ದೇಶನಾಲಯವೂ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದೆ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries