HEALTH TIPS

West Bengal |ಮಾಲ್ಡಾದಲ್ಲಿ ಬಿಜೆಪಿ ಬೆಂಬಲಿಗನಿಗೆ ಗುಂಡಿಕ್ಕಿ ಹತ್ಯೆ: ಘರ್ಷಣೆಯಲ್ಲಿ ಆರು ಮಂದಿಗೆ ಗಾಯ

ಮಾಲ್ಡಾ: ಅಪರಿಚಿತ ದುಷ್ಕರ್ಮಿಗಳು 35 ವರ್ಷದ ಬಿಜೆಪಿ ಬೆಂಬಲಿಗನಿಗೆ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಪಶ್ಚಿಬಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ನಡೆದಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಸಮೀರ್ ಘೋಷ್ ಎಂದು ಗುರುತಿಸಲಾಗಿದೆ. 


ಬುಧವಾರ ಸಂಜೆ ಇಂಗ್ಲಿಷ್ ಬಝಾರ್ ಪೊಲೀಸ್ ಠಾಣೆ ಪ್ರದೇಶ ವ್ಯಾಪ್ತಿಯ ರಾಮ್ ಕೇಲಿ ಪ್ರದೇಶದಲ್ಲಿ ಸಮೀರ್ ಘೋಷ್ ಮೇಲೆ ಮೊದಲಿಗೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು, ಬಳಿಕ ಎರಡು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ರಾಜಕೀಯ ಸೇಡಿನ ಕಾರಣಕ್ಕೆ ಈ ಹತ್ಯೆ ನಡೆಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಹತ್ಯೆಯ ಬೆನ್ನಿಗೆ, ಈ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘರ್ಷಣೆಯಲ್ಲಿ ಆರು ಮಂದಿಗೆ ಗಾಯಗಳಾಗಿದ್ದು, ಅವರನ್ನೆಲ್ಲ ಮಾಲ್ಡಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆದರೆ, ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಘಟನಾ ಪ್ರದೇಶದಲ್ಲಿ ಭಾರಿ ಪ್ರಮಾಣದ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries