HEALTH TIPS

ದಿಲ್ಲಿ: ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ ಕನಿಷ್ಠ 100 ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಪ್ರತಿಭಟನೆ ನಡೆಸಲು ಕನ್ನಾಟ್ ಪ್ಲೇಸ್ ಕಡೆಗೆ ಮೆರವಣಿಗೆ ನಡೆಸುತ್ತಿದ್ದ ಕನಿಷ್ಠ 100 ವಿದ್ಯಾರ್ಥಿಗಳನ್ನು ದಿಲ್ಲಿ ಪೊಲೀಸರು ರವಿವಾರ ವಶಕ್ಕೆ ಪಡೆದಿದ್ದಾರೆ.


ದಿಶಾ ವಿದ್ಯಾರ್ಥಿ ಸಂಘಟನೆ ಈ ಪ್ರತಿಭಟನೆಗೆ ಕರೆ ನೀಡಿದ್ದು, SIR ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದೆ.

ವಿದ್ಯಾರ್ಥಿಗಳು ಮಿಂಟೋ ರಸ್ತೆಯಿಂದ ಕನ್ನಾಟ್ ಪ್ಲೇಸ್ ಕಡೆಗೆ ಮೆರವಣಿಗೆ ನಡೆಸುತ್ತಿದ್ದಾಗ ಪೊಲೀಸರು ಅವರನ್ನು ಮಾರ್ಗಮಧ್ಯೆಯೇ ತಡೆದರು. ನಂತರ ಅವರನ್ನು ವಶಕ್ಕೆ ಪಡೆದರು.

ಚುನಾವಣಾ ಆಯೋಗದ SIR ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ವಿರೋಧ ಪಕ್ಷಗಳು ದೇಶಾದ್ಯಂತ ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ಈ ರ್ಯಾಲಿ ನಡೆಯಿತು.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries