HEALTH TIPS

ಸಾಯಿಬಾಬಾ ಅವರ 101ನೇ ಜನ್ಮದಿನೋತ್ಸವ: ಪುಟ್ಟಪರ್ತಿಗೆ ಸಿಎಂ ವಿ.ಡಿ. ಸತೀಶನ್ ಭೇಟಿ; ಕೇರಳ ಮುಖ್ಯಮಂತ್ರಿಯೊಬ್ಬರ ಮೊದಲ ಭೇಟಿ ಇದಾಗಿದೆ

ತಿರುವನಂತಪುರಂ: ಶ್ರೀ ಸತ್ಯಸಾಯಿ ಬಾಬಾ ಅವರ 101ನೇ ಜನ್ಮದಿನೋತ್ಸವದ ಅಂಗವಾಗಿ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಸೋಮವಾರ ಪುಟ್ಟಪರ್ತಿಗೆ ಭೇಟಿ ನೀಡಲಿದ್ದಾರೆ. ಕೇರಳದ ಮುಖ್ಯಮಂತ್ರಿಯೊಬ್ಬರು ಪುಟ್ಟಪರ್ತಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿಯಾಗಿದೆ.


ಪುಟ್ಟಪರ್ತಿಯ ಪ್ರಶಾಂತಿ ನಿಲಯದಲ್ಲಿ ಸತ್ಯಸಾಯಿ ಬಾಬಾ ಅವರ 101ನೇ ಜನ್ಮವಾರ್ಷಿಕೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾಗಿರುವ ಶತಮಾನೋತ್ಸವ ಸಮಾರೋಪ ಸಮಾರಂಭಗಳು ನವೆಂಬರ್ 16ರಿಂದ 24ರವರೆಗೆ ನಡೆಯಲಿವೆ.

ಇದರ ಭಾಗವಾಗಿ ನವೆಂಬರ್ 22ರಂದು ನಡೆಯಲಿರುವ ಶ್ರೀ ಸತ್ಯಸಾಯಿ ಉನ್ನತ ಶಿಕ್ಷಣ ಸಂಸ್ಥೆಯ (SSSIHL) 45ನೇ ಘಟಿಕೋತ್ಸವ ಸಮಾರಂಭದಲ್ಲಿ ಆಂಧ್ರಪ್ರದೇಶ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ನವೆಂಬರ್ 16ರಿಂದ 24ರವರೆಗೆ ಪ್ರಶಾಂತಿ ನಿಲಯದಲ್ಲಿ ವಿಶೇಷ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಪ್ರಮುಖ ದಿನವಾದ ನವೆಂಬರ್ 23ರಂದು ಹಿಲ್ ವ್ಯೂ ಕ್ರೀಡಾಂಗಣದಲ್ಲಿ ರಥೋತ್ಸವ, ಸಂಗೀತ ಕಛೇರಿ ಹಾಗೂ ಅನ್ನದಾನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries