HEALTH TIPS

ಮಣಿಪುರ: ನಕಲಿ ಮದ್ಯ ಸೇವಿಸಿ 13 ಮಂದಿ ಸಾವು, 346 ಜನ ಆಸ್ಪತ್ರೆಗೆ

ಇಂಫಾಲ್‌: ಮಣಿಪುರದ ಚಾಂಡೇಲ್‌ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. 300ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.


ಸಂತ್ರಸ್ತರು ಚಕ್ಪಿಕಾರೊಂಗ್‌ ಪಟ್ಟಣ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶದವರು. 

ಅವರನ್ನೆಲ್ಲ, ಇಂಫಾಲದ ಜೆಎನ್‌ಐಎಂಎಸ್, ಆರ್‌ಐಎಂಎಸ್, ಶಿಜಾ, ಮತ್ತು ಬಬಿನಾ ಆಸ್ಪತ್ರೆ ಸೇರಿದಂತೆ ವಿವಿಧ ವೈದ್ಯಕೀಯ ಸಂಸ್ಥೆಗಳಿಗೆ ದಾಖಲಿಸಲಾಗಿದೆ.

‘ಶುಕ್ರವಾರ ರಾತ್ರಿವರೆಗೆ 13 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಶಂಕಿತ ಮೆಥನಾಲ್ ವಿಷಪೂರಿತ ಮದ್ಯ ಸೇವನೆಯಿಂದ ಇದುವರಗೆ 346 ಮಂದಿ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಖ್ಯಮಂತ್ರಿ ವೈ. ಖೇಮ್‌ಚಂದ್ ಸಿಂಗ್ ಅವರು ಶುಕ್ರವಾರ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಅನಾರೋಗ್ಯಪೀಡಿತರ ಆರೋಗ್ಯ ವಿಚಾರಿಸಿದ್ದಾರೆ.

‘ಶಿಜಾ ಆಸ್ಪತ್ರೆಯಲ್ಲಿ 140 ಹಾಗೂ ಬಬಿನಾ ಆಸ್ಪತ್ರೆಯಲ್ಲಿ 41 ಮಂದಿಯನ್ನು ದಾಖಲಿಸಲಾಗಿದೆ. ಕಳೆದ 48 ಗಂಟೆಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದೆ. ತನಿಖೆ ಆರಂಭವಾಗಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ತನಿಖೆ ಪ್ರಗತಿಯಲ್ಲಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries