HEALTH TIPS

1962ರ ಅವಮಾನಕ್ಕೆ ಕ್ಷಮೆ ಕೇಳುತ್ತಾ? 'ಬಡ ರಾಷ್ಟ್ರ'ವಾಗಿ ಕಾಂಗ್ರೆಸ್ ಏಕೆ ಇರಿಸಿತ್ತು; ಭಾರತವನ್ನು 'ಹಾವಾಡಿಗರ ದೇಶ' ಎಂದು ಏಕೆ ಕರೆಯಲಾಗುತ್ತಿತ್ತು?

 ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಹುಲ್ ಗಾಂಧಿ ಅವರು compromised PM ಎಂದು ಟೀಕಿಸಿರುವುದಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ವಿರೋಧ ಪಕ್ಷಕ್ಕೆ ನಾಲ್ಕು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.


ಇದರಲ್ಲಿ "1962ರ ಅವಮಾನ"ಕ್ಕಾಗಿ ಕಾಂಗ್ರೆಸ್ ಕ್ಷಮೆ ಕೇಳುತ್ತದೆಯೇ ಮತ್ತು ಭಾರತವನ್ನು "ಬಡ ರಾಷ್ಟ್ರ"ವನ್ನಾಗಿ ಏಕೆ ಇರಿಸಿತ್ತು ಎಂಬ ಪ್ರಶ್ನೆಗಳು ಸೇರಿವೆ.

'ಎಕ್ಸ್' (X) ತಾಣದಲ್ಲಿ ಪೋಸ್ಟ್ ಮಾಡಿರುವ ರಿಜಿಜು, "ಕಾಂಗ್ರೆಸ್ ನಾಲ್ಕು ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದಿದ್ದಾರೆ.

1. 1962ರಲ್ಲಿ ನನ್ನ ಗ್ರಾಮವನ್ನು ಚೀನಾ ಆಕ್ರಮಿಸಿಕೊಂಡಿತ್ತು. ಈ 1962ರ ಅವಮಾನಕ್ಕಾಗಿ ಕಾಂಗ್ರೆಸ್ ಕ್ಷಮೆ ಕೇಳುತ್ತದೆಯೇ?

2. ಕಾಂಗ್ರೆಸ್ ಭಾರತವನ್ನು ಬಡ ರಾಷ್ಟ್ರವನ್ನಾಗಿ ಇರಿಸಿತ್ತು. ಏಕೆ?

3. ಭಾರತವನ್ನು 'ಹಾವು ಹಿಡಿಯುವವರ ನಾಡು' ಎಂದು ಏಕೆ ಕರೆಯಲಾಗುತ್ತಿತ್ತು?

4. ಭಾರತದ ಆರ್ಥಿಕ ಬೆಳವಣಿಗೆಯ ದರವನ್ನು 'ಹಿಂದೂ ಬೆಳವಣಿಗೆ ದರ' ಎಂದು ಕರೆದು ಏಕೆ ಅವಮಾನಿಸಲಾಯಿತು?" ಎಂದು ಪ್ರಶ್ನಿಸಿದ್ದಾರೆ.

ಚೀನಾದಲ್ಲಿ ನಡೆದ ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ (APEC) ಶೃಂಗಸಭೆಯ ಸಂದರ್ಭದಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಡುವೆ ನಡೆದ ತ್ರಿಪಕ್ಷೀಯ ಸಭೆಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿಯನ್ನು ಟೀಕಿಸಿದ ನಂತರ, ರಿಜಿಜು ಈ ಪ್ರತಿಕ್ರಿಯೆ ನೀಡಿದ್ದಾರೆ.

ಸಭೆಯಲ್ಲಿ ಈ ಮೂವರು ನಾಯಕರು ಕುಳಿತಿರುವ ಫೋಟೋವನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, ಒಂದು ವೇಳೆ ಕಾಂಗ್ರೆಸ್ ಅಧಿಕಾರದಲ್ಲಿದ್ದಿದ್ದರೆ, ಭಾರತದ ಪ್ರಧಾನಿ ಈ ಮೇಜಿನ ಬಳಿ ಕುಳಿತಿರುತ್ತಿದ್ದರು. ಆದರೆ, ರಾಜಿಯಾದ ಪ್ರಧಾನಿಯೊಬ್ಬರು ಎಂದಿಗೂ ಈ ಮೇಜಿನ ಬಳಿ ಕುಳಿತುಕೊಳ್ಳಲು ಸಾಧ್ಯವಿಲ್ಲ" ಎಂದು 'ಎಕ್ಸ್'ನಲ್ಲಿ ಬರೆದುಕೊಂಡಿದ್ದರು.

ಶುಕ್ರವಾರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಿಜಿಜು, ರಾಹುಲ್ ಗಾಂಧಿ ಅವರು ದೇಶದಲ್ಲಿರಲಿ ಅಥವಾ ವಿದೇಶದಲ್ಲಿರಲಿ, ಭಾರತದ ವಿರುದ್ಧ ಹೇಳಿಕೆಗಳನ್ನು ನೀಡಬಾರದು ಎಂದು ಹೇಳಿದರು.

ಕಾಂಗ್ರೆಸ್ ನಾಯಕರ ಈ ಹೇಳಿಕೆಯು ಬಿಜೆಪಿ ಮತ್ತು ವಿರೋಧ ಪಕ್ಷದ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು. ಹಲವು ಬಿಜೆಪಿ ನಾಯಕರು, ಜಾಗತಿಕ ಭೌಗೋಳಿಕ ರಾಜಕೀಯದ ಬಗ್ಗೆ ರಾಹುಲ್ ಗಾಂಧಿ ಅವರಿಗೆ "ಯಾವುದೇ ಅರಿವಿಲ್ಲ" ಎಂದು ಟೀಕಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries