ಕಾಸರಗೋಡು: ವರಕ್ಕಿಲ ಶ್ರೀ ಮಹಾದೇವ ಶಾಸ್ತಾ ವಿನಾಯಕ ಕ್ಷೇತ್ರದಲ್ಲಿ ವಿಶೇಷ ಕಾರ್ತಿಕ ಮಾಸದ ಪೂಜೆಯ ಪ್ರಯುಕ್ತ, ಡಿಸೆಂಬರ್ 1ರ ಮಂಗಳವಾರ ಸಂಜೆ 6 ಗಂಟೆಯಿಂದ 7 ಗಂಟೆಯವರೆಗೆ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಪ್ರಭಾಕರ ಕುಂಜಾರ್ ಮತ್ತು ಶ್ರೀವಿದ್ಯಾ ಬಿ.ಆರ್. ಉಳಿಯ ಅವರಿಂದ ಸುಮಧುರ ವಯಲಿನ್ ವಾದನ ಜರುಗಲಿದೆ. ಸರ್ವ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ, ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಕ್ಷೇತ್ರದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ವಿನಂತಿಸಿದೆ.


