ಪೆರ್ಲ: ಶೇಣಿ ಮಣಿಯಂಪಾರೆ ಶ್ರೀ ಅಯ್ಯಪ್ಪ ಭಜನಾ ಮಂದಿರದ 30ನೇ ವಾರ್ಷಿಕೋತ್ಸವವನ್ನು ಡಿಸೆಂಬರ್ 25ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ.
ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಂದಿರದಲ್ಲಿ ಆನಂದ ಗುರುಸ್ವಾಮಿ ಸಂಟನಡ್ಕ ಅವರ ನೇತೃತ್ವದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಂದಿರ ಸಮಿತಿಯ ಪದಾಧಿಕಾರಿಗಳು ಹಾಗೂ ಮಹಿಳಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ವಾರ್ಷಿಕೋತ್ಸವದ ಅಂಗವಾಗಿ ಡಿ. 25ರಂದು ಬೆಳಿಗ್ಗೆ 8.30ಕ್ಕೆ ಗಣಪತಿ ಹವನ, 9.30ಕ್ಕೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭಗೊಳ್ಳಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಹಾಗೂ 1 ಗಂಟೆಗೆ ಪ್ರಸಾದ ಭೋಜನ ನಡೆಯಲಿದೆ.
ಸಂಜೆ 4.30ರಿಂದ ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಭಜನಾ ತಂಡದಿಂದ ಭಜನೆ ಹಾಗೂ 6.15ಕ್ಕೆ ಮಣಿಯಂಪಾರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ತಂಡದಿಂದ ಭಜನೆ ಜರುಗಲಿದೆ. ರಾತ್ರಿ 7 ಗಂಟೆಗೆ ಮಣಿಯಂಪಾರೆ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದಿಂದ ಉತ್ಸವ ಮೆರವಣಿಗೆ ಹೊರಡಲಿದ್ದು, 7.45ಕ್ಕೆ ದಳ ಕಲ್ಲಡ್ಕದ ಶ್ರೀ ದೇವಿ ಭಜನಾ ಸಂಘದಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9.30ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಉತ್ಸವ ಸಂಪನ್ನಗೊಳ್ಳಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಮಿತಿಯವರು ಪ್ರಕಟಣೆಯಲ್ಲಿ ಕೋರಿದ್ದಾರೆ.

.jpg)
.jpg)
