HEALTH TIPS

ನ. 29ರಂದು ಕನ್ನಡ ಗ್ರಾಮದಲ್ಲಿ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ ಹಾಗೂ ಮಕ್ಕಳ ಶತಕವಿಗೋಷ್ಠಿ


ಕಾಸರಗೋಡು
:
ಪಾರೆಕಟ್ಟೆ ಕನ್ನಡ ಗ್ರಾಮದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಸಹಯೋಗದೊಂದಿಗೆ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ ಮತ್ತು 'ಮಕ್ಕಳ ಶತಕವಿಗೋಷ್ಠಿ'ಯು ನವೆಂಬರ್ 29ರಂದು ಬೆಳಿಗ್ಗೆ 10 ಗಂಟೆಗೆ ಕಾಸರಗೋಡಿನ ಮೀಪುಗುರಿ-ಪಾರೆಕಟ್ಟೆ ರಸ್ತೆಯ ಕನ್ನಡ ಗ್ರಾಮದಲ್ಲಿ ನಡೆಯಲಿದೆ.

ಮಕ್ಕಳ ಸಾಹಿತ್ಯವನ್ನು ಪುನಶ್ಚೇತನಗೊಳಿಸಿ, ಮಕ್ಕಳ ಸಾಹಿತಿಗಳು, ಕವಿ-ಕವಯತ್ರಿಯರು ಹಾಗೂ ಬರಹಗಾರರಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ಕೇರಳ ಮತ್ತು ಕರ್ನಾಟಕ ರಾಜ್ಯದ ಮಕ್ಕಳ ಸಾಹಿತ್ಯ ಉತ್ಸವ ಹಾಗೂ ಮಕ್ಕಳ ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಛಿಸುವ ಮಕ್ಕಳ ಸಾಹಿತಿಗಳು, ಕವಿ-ಕವಯತ್ರಿಯರು, 1ರಿಂದ 10ನೇ ತರಗತಿಯ ವಿದ್ಯಾರ್ಥಿ ಕವಿಗಳು ಹಾಗೂ ಕಾಲೇಜು (ಪದವಿ ಪೂರ್ವ, ಪದವಿ ಮತ್ತು ಸ್ನಾತಕೋತ್ತರ) ವಿದ್ಯಾರ್ಥಿ ಕವಿಗಳು ತಮ್ಮ ಹೆಸರು, ಪೂರ್ಣ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ವಾಟ್ಸಾಪ್ ಮೂಲಕ ಕಳುಹಿಸಿಕೊಡಬೇಕು. ಆಯ್ಕೆಯಾದವರಿಗೆ ಮಕ್ಕಳ ಕವನಗಳನ್ನು ವಾಚಿಸಲು ಅವಕಾಶ ನೀಡಲಾಗುವುದು.

ಕವಿಗೋಷ್ಠಿಯಲ್ಲಿ ಭಾಗವಹಿಸಿದ ಎಲ್ಲಾ ಕವಿಗಳಿಗೆ ಪ್ರಮಾಣಪತ್ರ, ಸ್ಮರಣಿಕೆ ಹಾಗೂ ಸಾಹಿತ್ಯ ಕೃತಿಗಳ ಕಿಟ್ ನೀಡಿ ಗೌರವಿಸಲಾಗುವುದು. ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಣಿಗಾಗಿ ಶಿವರಾಮ ಕಾಸರಗೋಡು, ಅಧ್ಯಕ್ಷರು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕನ್ನಡ ಗ್ರಾಮ, ಕನ್ನಡ ಗ್ರಾಮ ರಸ್ತೆ, ಕಾಸರಗೋಡು-671121 (ಮೊಬೈಲ್: 9448572016) ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries