HEALTH TIPS

ಮಣಿಪುರದಲ್ಲಿ ಮತ್ತೆ ಜನಾಂಗೀಯ ಹಿಂಸಾಚಾರ: 2 ಪ್ರತ್ಯೇಕ ಘಟನೆಗಳಲ್ಲಿ ಐದು ಮಂದಿ ಬಲಿ

ನವದೆಹಲಿ/ ಇಂಫಾಲ್‌ (PTI): ಈಶಾನ್ಯ ರಾಜ್ಯ ಮಣಿಪುರದಲ್ಲಿ ನಡೆದ ಎರಡು ‍ಪ್ರತ್ಯೇಕ ಘಟನೆಗಳಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಮೂಲಕ ಸಂಘರ್ಷಪೀಡಿತ ಪ್ರದೇಶದಲ್ಲಿ ಮತ್ತೆ ಜನಾಂಗೀಯ ಹಿಂಸಾಚಾರಗಳು ಆರಂಭಗೊಂಡಿವೆ.


'ಇಲ್ಲಿನ ನೋನೆ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮೃತಪಟ್ಟಿದ್ದಾರೆ' ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಮತ್ತೊಂದು ಪ್ರಕರಣದಲ್ಲಿ, ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಕಳೆದ ವಾರ ನಾಪತ್ತೆಯಾಗಿದ್ದ ಕುಕಿ ಸಮುದಾಯದ ಇಬ್ಬರು ಯುವಕರ ಮೃತದೇಹಗಳು ಛಿದ್ರಗೊಂಡ ಸ್ಥಿತಿಯಲ್ಲಿ ಬಾಳೆತೋಟದ ಪತ್ತೆಯಾಗಿವೆ. ಕೂಡಲೇ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಮತ್ತೊಂದು ಪ್ರಕಟಣೆಯಲ್ಲಿ ತಿಳಿಸಿದೆ.

ಮೃತ ಯುವಕರನ್ನು ನಾಗಾ ಬಂಡುಕೋರರು ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂದು ಕುಕಿ ಸಮುದಾಯದ ಮುಖಂಡರು ಆರೋಪಿಸಿದ್ದಾರೆ.

ಪ್ರತಿಭಟನೆ: ಯುವಕರ ಹತ್ಯೆ ಖಂಡಿಸಿ ಕುಕಿ ಸಮುದಾಯದವರು ಕಾಂಗ್‌ಪೋಕ್ಪಿ ಜಿಲ್ಲಾಕೇಂದ್ರದಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರನ್ನು ಭದ್ರತಾ ಸಿಬ್ಬಂದಿ ಆಶ್ರುವಾಯು ಪ್ರಯೋಗಿಸಿ ಚದುರಿಸಿದರು. ಈ ವೇಳೆ ಕೆಲವು ಮಂದಿ ಗಾಯಗೊಂಡಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.

ಯುವಕರ ಹತ್ಯೆಯನ್ನು ಉಪಮುಖ್ಯಮಂತ್ರಿ ನೆಮ್ಚಾ ಕಿಪ್‌ಗೆನ್‌ ಅವರು ಬಲವಾಗಿ ಖಂಡಿಸಿದ್ದಾರೆ. ಅತ್ಯಂತ ಹೀನಾಯ ಕೃತ್ಯ ಇದಾಗಿದ್ದು, ವಿಸ್ತೃತವಾಗಿ ತನಿಖೆ ನಡೆಸಲಾಗುವುದು. ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಿ, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.

ದಾಳಿಕೋರರನ್ನು ಬಂಧಿಸುವವರೆಗೂ ಮೃತದೇಹಗಳ ಅಂತ್ಯಸಂಸ್ಕಾರ ನಡೆಸುವುದಿಲ್ಲ ಎಂದು ಕುಕಿ ಸಮುದಾಯದ ಮುಖಂಡರು ತಿಳಿಸಿದ್ದಾರೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries