HEALTH TIPS

ಕೇರಳದಲ್ಲಿ ಮತಗಟ್ಟೆಗಳ ಪುನರ್‌ವಿಂಗಡಣೆಗೆ ಚುನಾವಣಾ ಆಯೋಗದ ಅನುಮೋದನೆ; 30,682ಕ್ಕೆ ಏರಿಕೆ

ತಿರುವನಂತಪುರಂ: ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಸುಗಮ ಹಾಗೂ ಪರಿಣಾಮಕಾರಿಯಾಗಿಸುವುದರ ಜೊತೆಗೆ ಮತದಾರರು ಅನುಕೂಲಕರವಾಗಿ ಮತ ಚಲಾಯಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಕೇರಳ ಸರ್ಕಾರ ಸಲ್ಲಿಸಿದ್ದ ಮತಗಟ್ಟೆಗಳ ಪುನರ್‌ವಿಂಗಡಣೆ ಪ್ರಸ್ತಾವನೆಗೆ ಭಾರತೀಯ ಚುನಾವಣಾ ಆಯೋಗ ಅನುಮೋದನೆ ನೀಡಿದೆ. 


ಪುನರ್‌ವಿಂಗಡಣೆಗೆ ಮೊದಲು ರಾಜ್ಯದಲ್ಲಿ ಒಟ್ಟು 30,471 ಮತಗಟ್ಟೆಗಳಿದ್ದವು. ಇದೀಗ ಪುನರ್‌ವಿಂಗಡಣೆಯ ಭಾಗವಾಗಿ 216 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಐದು ಮತಗಟ್ಟೆಗಳನ್ನು ವಿಲೀನಗೊಳಿಸಲಾಗಿದೆ. ಅಲ್ಲದೆ, 178 ಮತಗಟ್ಟೆಗಳ ಸ್ಥಳ ಅಥವಾ ಕಟ್ಟಡಗಳನ್ನು ಬದಲಾಯಿಸಲಾಗಿದೆ. ಇದರಿಂದ ರಾಜ್ಯದ ಒಟ್ಟು ಮತಗಟ್ಟೆಗಳ ಸಂಖ್ಯೆ 30,682ಕ್ಕೆ ಏರಿಕೆಯಾಗಿದೆ.

ಮತಗಟ್ಟೆಗಳ ಪುನರ್‌ವಿಂಗಡಣೆ ಸಂದರ್ಭದಲ್ಲಿ ಪ್ರಸ್ತುತ ಮತಗಟ್ಟೆಗಳಲ್ಲಿರುವ ಮತದಾರರ ಸಂಖ್ಯೆ, ಮೂಲಸೌಕರ್ಯ ಸೌಲಭ್ಯಗಳು, ಕಟ್ಟಡಗಳ ಲಭ್ಯತೆ, ಮತದಾರರು ಮತಗಟ್ಟೆಗಳಿಗೆ ಸುಲಭವಾಗಿ ತಲುಪುವ ವ್ಯವಸ್ಥೆ ಹಾಗೂ ಭೌಗೋಳಿಕ ಪರಿಸ್ಥಿತಿಗಳನ್ನು ಪರಿಗಣಿಸಲಾಗಿದೆ.

ಚುನಾವಣಾ ಆಯೋಗ ನಿಗದಿಪಡಿಸಿರುವ ಮಾನದಂಡಗಳು ಮತ್ತು ಪ್ರತಿ ಮತಗಟ್ಟೆಯಲ್ಲಿ ಅನುಮತಿಸಲಾದ ಗರಿಷ್ಠ ಮತದಾರರ ಸಂಖ್ಯೆಗೆ ಅನುಗುಣವಾಗಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಹಾಗೂ ಅಗತ್ಯವಿರುವ ಕಡೆಗಳಲ್ಲಿ ಹಾಲಿ ಮತಗಟ್ಟೆಗಳನ್ನು ಸ್ಥಳಾಂತರಿಸುವ ಕ್ರಮ ಕೈಗೊಳ್ಳಲಾಗಿದೆ.

ಈ ಸಂಬಂಧ ಆಯಾ ಜಿಲ್ಲಾಧಿಕಾರಿಗಳು ಮುಂದಿನ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ತಿಳಿಸಿದೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries