HEALTH TIPS

ಬಹಿಷ್ಕಾರದ ಎಚ್ಚರಿಕೆ ನಡುವೆಯೂ ಡಿ.4 ರಂದು ಲಡಾಖ್‌ನಲ್ಲಿ 'ಹಿಲ್ ಡೆವಲಪ್ಮೆಂಟ್ ಕೌನ್ಸಿಲ್' ಚುನಾವಣೆ

ನವದೆಹಲಿ: 2019ರಲ್ಲಿ ಲಡಾಖ್ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾದ ಬಳಿಕ, ಇದೇ ಮೊದಲ ಬಾರಿಗೆ ಪ್ರಮುಖ ಚುನಾವಣಾ ಪ್ರಕ್ರಿಯೆಯೊಂದಕ್ಕೆ ಸಾಕ್ಷಿಯಾಗಲಿದೆ. ಚಳಿಗಾಲದಲ್ಲಿ ಚುನಾವಣೆ ನಡೆಸುವುದರ ವಿರುದ್ಧ ಪ್ರತಿಭಟನೆಗಳು ಹಾಗೂ ಬಹಿಷ್ಕಾರದ ಎಚ್ಚರಿಕೆ ನಡೆವೆಯೂ, 8 'ಹಿಲ್ ಡೆವಲಪ್ಮೆಂಟ್ ಕೌನ್ಸಿಲ್'ಗಳಿಗೆ ಡಿ.4 ರಂದು ಚುನಾವಣೆಯ ನಡೆಯಲಿದೆ.

'ಕೌನ್ಸಿಲ್'ಗಳ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಒಟ್ಟು 100 ಸ್ಥಾನಗಳನ್ನು ಹೊಂದಿವೆ. ಮಹಿಳೆಯರಿಗಾಗಿ 36 ಸ್ಥಾನಗಳನ್ನು ಮೀಸಲಿಡಲಾಗಿದೆ.

ನ.17 ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದ್ದು, ನ.18 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನ.20 ರವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆಯಬಹುದು.

ಚುನಾವಣಾ ಪ್ರಕ್ರಿಯೆಯು ಡಿ.8 ರೊಳಗೆ ಪೂರ್ಣಗೊಳ್ಳಲಿದೆ.

ಚಳಿಗಾಲದ ತಿಂಗಳಲ್ಲಿ ಚುನಾವಣೆ ನಡೆಸುವ ನಿರ್ಧಾರವನ್ನು ಲಡಾಖ್‌ನ ಮುಖ್ಯ ಕಾರ್ಯದರ್ಶಿ ಆಶಿಶ್ ಕುಂದ್ರಾ ಸಮರ್ಥಿಸಿಕೊಂಡಿದ್ದಾರೆ. ಹವಾಮಾನ ಪರಿಸ್ಥಿತಿಗಳಿಂದಾಗಿ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವುದರಿಂದ ವಿಮುಖರಾಗದಂತೆ ನೋಡಿಕೊಳ್ಳಲು ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ವೃದ್ಧ ಮತದಾರರು ಪ್ರತ್ಯೇಕ ಸಾಲುಗಳಲ್ಲಿ ಬಂದು ಮತದಾನ ಮಾಡಲು ಅವಕಾಶ ಕಲ್ಪಿಸಲಾಗುವುದು. ಮತಗಟ್ಟೆಗಳಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಲಡಾಖ್‌ನಲ್ಲಿ ಶಾಲೆಗಳು ಡಿ.15 ಅಥವಾ 16 ರವರೆಗೆ ತೆರೆದಿರುತ್ತವೆ. ಈ ಅವಧಿಯಲ್ಲಿ ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುವುದಾದರೆ, ವಯಸ್ಕರು ಮತ ಚಲಾಯಿಸಲು ಯಾವುದೇ ತೊಂದರೆಯಾಗುವುದಿಲ್ಲ ಎಂದಿದ್ದಾರೆ.

ಪಂಚಾಯತಿ ಮತ್ತು ಪುರಸಭೆಗಳಿಗೂ ಚುನಾವಣಾ ಪ್ರಕ್ರಿಯೆಯೂ ನಡೆಯುತ್ತಿದೆ. ಲಡಾಖ್‌ನಲ್ಲಿ 192 ಪಂಚಾಯತಿಗಳಿವೆ. ಅವುಗಳಲ್ಲಿ 55 ಸರ್ಪಂಚ್‌ಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದು, ಪ್ರಮಾಣಪತ್ರಗಳನ್ನು ವಿತರಿಸಲಾಗಿದೆ. ಉಳಿದ 137 ಸರ್ಪಂಚ್ ಸ್ಥಾನಗಳಿಗೆ ಮತದಾನ ನಡೆಯಲಿದೆ.

ಪುರಸಭೆ ಚುನಾವಣೆಯಲ್ಲಿ ಲೇಹ್ 21 ವಾರ್ಡ್‌ಗಳನ್ನು ಒಳಗೊಂಡಿದ್ದು, 42 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾರ್ಗಿಲ್ ಪುರಸಭೆ 17 ವಾರ್ಡ್‌ಗಳನ್ನು ಹೊಂದಿದ್ದು, 4 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಳೆದ ಮೂರು ವರ್ಷಗಳಿಂದ ಲಡಾಖ್‌ನಲ್ಲಿ ಪಂಚಾಯತಿ ಚುನಾವಣೆಗಳು ನಡೆದಿರಲಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries