HEALTH TIPS

ಐದನೇ ರಾಷ್ಟ್ರವ್ಯಾಪಿ ಡಿಜಿಟಲ್ ಜೀವಿತ ಪ್ರಮಾಣಪತ್ರ ಅಭಿಯಾನಕ್ಕೆ ಭರ್ಜರಿ ಸ್ಪಂದನೆ: ಫೇಸ್ ದೃಢೀಕರಣ ಬಳಕೆ ಶೇ.80ಕ್ಕೆ ಏರಿಕೆ

ಮೊದಲ ಐದು ದಿನಗಳಲ್ಲಿ ಸುಮಾರು 40 ಲಕ್ಷ ಪ್ರಮಾಣಪತ್ರ ವಿತರಣೆ; ಕಳೆದ ವರ್ಷ ಇದೇ ಅವಧಿಯಲ್ಲಿ 25 ಲಕ್ಷ ಮಾತ್ರ ವಿತರಣೆ – ಕೇಂದ್ರ ಸಚಿವ ಜಿತೇಂದ್ರ ಸಿಂಗ್

ನವದೆಹಲಿ: ಐದನೇ ರಾಷ್ಟ್ರವ್ಯಾಪಿ ಡಿಜಿಟಲ್ ಜೀವಿತ ಪ್ರಮಾಣಪತ್ರ ಅಭಿಯಾನದ ಮೊದಲ ಐದು ದಿನಗಳಲ್ಲಿ ಪ್ರಮಾಣಪತ್ರ ವಿತರಣೆಯಲ್ಲಿ ಶೇ.60ರಷ್ಟು ಏರಿಕೆ ದಾಖಲಾಗಿದೆ ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. 


ಕಳೆದ ವರ್ಷ ಇದೇ ಅವಧಿಯಲ್ಲಿ 25 ಲಕ್ಷ ಪ್ರಮಾಣಪತ್ರಗಳನ್ನು ವಿತರಿಸಲಾಗಿತ್ತು. ಆದರೆ ಈ ಬಾರಿ ಸುಮಾರು 40 ಲಕ್ಷ ಪ್ರಮಾಣಪತ್ರಗಳನ್ನು ವಿತರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬ್ಯಾಂಕ್‌ಗಳು ಅಥವಾ ಸರ್ಕಾರಿ ಕಚೇರಿಗಳಿಗೆ ಖುದ್ದಾಗಿ ತೆರಳದೆ ಮೊಬೈಲ್ ಫೋನ್ ಮೂಲಕವೇ ಜೀವಿತ ಪ್ರಮಾಣಪತ್ರ ಸಲ್ಲಿಸಲು ನೆರವಾಗುವ ಫೇಸ್ ದೃಢೀಕರಣ ತಂತ್ರಜ್ಞಾನಕ್ಕೆ ಪಿಂಚಣಿದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ತಂತ್ರಜ್ಞಾನದ ಬಳಕೆ ಪ್ರಮಾಣ ಶೇ.61ರಿಂದ ಸುಮಾರು ಶೇ.80ಕ್ಕೆ ಏರಿಕೆಯಾಗಿದೆ ಎಂದು ಸಚಿವರು ತಿಳಿಸಿದರು.

ವಿಕಸಿತ ಭಾರತದ ನಿರ್ಮಾಣದಲ್ಲಿ ಹಿರಿಯ ನಾಗರಿಕರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಲು ಇಂತಹ ತಾಂತ್ರಿಕ ಆವಿಷ್ಕಾರಗಳು ಸಹಕಾರಿಯಾಗಲಿವೆ ಎಂದು ಅವರು ಅಭಿಪ್ರಾಯಪಟ್ಟರು.

ಪ್ರಸ್ತುತ ಕೇಂದ್ರ ಸರ್ಕಾರದ ಪಿಂಚಣಿದಾರರ ಸಂಖ್ಯೆ ಸುಮಾರು 70 ಲಕ್ಷಕ್ಕೆ ಏರಿಕೆಯಾಗಿದೆ.

ದೇಶಾದ್ಯಂತ ಸುಮಾರು 3,000 ಕೇಂದ್ರಗಳ ಮೂಲಕ ಈ ಅಭಿಯಾನವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹಾಸಿಗೆ ಹಿಡಿದಿರುವ ಹಾಗೂ ಕಚೇರಿಗಳಿಗೆ ತೆರಳಲು ಸಾಧ್ಯವಾಗದ ಪಿಂಚಣಿದಾರರಿಗೆ ಮನೆ ಬಾಗಿಲಿನಲ್ಲಿಯೇ ಸೇವೆ ಒದಗಿಸುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

ಪಿಂಚಣಿ ಸಂಬಂಧಿತ ದೂರುಗಳ ಪರಿಹಾರಕ್ಕಾಗಿ 'ಸಿಪೆನ್‌ಗ್ರಾಮ್ಸ್' ವ್ಯವಸ್ಥೆ ಹಾಗೂ ಪಿಂಚಣಿ ಅದಾಲತ್‌ಗಳನ್ನು ಮತ್ತಷ್ಟು ಬಲಪಡಿಸಲಾಗಿದೆ ಎಂದು ಸಚಿವ ಜಿತೇಂದ್ರ ಸಿಂಗ್ ತಿಳಿಸಿದರು. 





 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries