ಚಿಕಿತ್ಸೆಯ ನೆಪದಲ್ಲಿ ಕರೆಸಿಕೊಂಡು ಕೃತ್ಯ; ₹3 ಲಕ್ಷ ಮೌಲ್ಯದ ಮೊಬೈಲ್ ಫೋನ್‌ಗಳ ದರೋಡೆ
ಕೊಚ್ಚಿ: ಚಿಕಿತ್ಸೆ ನೀಡುವ ನೆಪದಲ್ಲಿ ಕರೆಸಿಕೊಂಡು ಯುವ ವೈದ್ಯನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ನಟಿ ಹಾಗೂ ವಕೀಲೆಯಾಗಿರುವ ಅತುಲ್ಯಾ ಚಂದ್ರನ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಅತುಲ್ಯಾ ಸೇರಿದಂತೆ ಒಟ್ಟು ೧೨ ಮಂದಿ ಆರೋಪಿಗಳಿದ್ದಾರೆ ಎಂದು ತಿಳಿದುಬಂದಿದೆ.
ನವೆಂಬರ್ ೨ರಂದು ಈ ಘಟನೆ ನಡೆದಿದ್ದು, ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಬೇಕೆಂದು ಸುಳ್ಳು ಹೇಳಿ ವೈದ್ಯನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಳ್ಳಲಾಗಿತ್ತು. ಅಲ್ಲಿಗೆ ತಲುಪಿದ ವೈದ್ಯನ ಮೇಲೆ ಆರೋಪಿಗಳ ತಂಡವು ಮನಸೋಇಚ್ಛೆ ಹಲ್ಲೆ ನಡೆಸಿ, ಸುಮಾರು ₹೩ ಲಕ್ಷ ಮೌಲ್ಯದ ಮೊಬೈಲ್ ಫೋನ್‌ಗಳನ್ನು ಕಸಿದುಕೊಂಡು ಪರಾರಿಯಾಗಿತ್ತು.
ವೈದ್ಯರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ನಟಿ ಅತುಲ್ಯಾ ಚಂದ್ರನ್ ಸೇರಿ ಮೂವರನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.



