HEALTH TIPS

ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವ: ಮೀಯಪದವಿನಲ್ಲಿ ಪೂರ್ವಭಾವಿ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ


ಮಂಜೇಶ್ವರ
: ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವದ ಪೂರ್ವಭಾವಿ ಸಭೆಯು ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಕೇಶವಾಮೃತ ಸಭಾಭವನದಲ್ಲಿ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀಯಪದವು ಗ್ರಾಮ ಪಂಚಾಯತಿ ಅಧ್ಯಕ್ಷ ತಾಜುದ್ದೀನ್ ಅವರು ವಹಿಸಿದ್ದರು.

ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ನಾರಾಯಣ ದೇಲಂಪಾಡಿ ಸಭೆಯಲ್ಲಿ ಉಪಸ್ಥಿತರಿದ್ದು, ಕಲೋತ್ಸವದ ಪೂರ್ವಸಿದ್ಧತೆಗಳು, ವೇದಿಕೆ ನಿರ್ವಹಣೆ ಹಾಗೂ ಸಂಘಟನಾ ಕಾರ್ಯಗಳ ಕುರಿತು ಸಮಗ್ರ ಮಾರ್ಗದರ್ಶನ ನೀಡಿದರು. ವಿವಿಧ ಉಪಸಮಿತಿಗಳ ಸಂಚಾಲಕರು ತಮ್ಮ ತಮ್ಮ ಸಮಿತಿಗಳ ಜವಾಬ್ದಾರಿಗಳು ಹಾಗೂ ಕಲೋತ್ಸವದ ಯಶಸ್ಸಿಗೆ ಕೈಗೊಳ್ಳಬೇಕಾದ ಕಾರ್ಯಗಳ ರೂಪುರೇಷೆಯನ್ನು ಸಭೆಯ ಮುಂದಿಟ್ಟರು.

ಇದೇ ಸಂದರ್ಭದಲ್ಲಿ, ನವೆಂಬರ್ 5, 11, 12 ಮತ್ತು 13 ರಂದು ನಡೆಯಲಿರುವ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವದ ಅಧಿಕೃತ ಆಮಂತ್ರಣ ಪತ್ರಿಕೆಯನ್ನು ಗಣ್ಯರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.

ಸಭೆಯಲ್ಲಿ ಭಾಗವಹಿಸಿದ್ದ ಆರೋಗ್ಯ ಇಲಾಖೆಯ ಪ್ರತಿನಿಧಿಗಳು ಕಲೋತ್ಸವದ ದಿನಗಳಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಪಾಲಿಸಬೇಕಾದ ಶುಚಿತ್ವ, ಆಹಾರ ನೈರ್ಮಲ್ಯ ಹಾಗೂ ಆರೋಗ್ಯ ಸುರಕ್ಷತಾ ಕ್ರಮಗಳ ಕುರಿತು ಸೂಕ್ತ ಮುನ್ನೆಚ್ಚರಿಕೆ ಮತ್ತು ಸಲಹೆಗಳನ್ನು ನೀಡಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries