ಶೇ. 92.5 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ಸಾಧನೆ; ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಪ್ರತಿಭಾ ಪುರಸ್ಕಾರಕ್ಕೂ ಭಾಜನ
ಬದಿಯಡ್ಕ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ನಡೆಸಿದ 2025-26ನೇ ಸಾಲಿನ ಕರ್ನಾಟಕ ಶಾಸ್ತ್ರೀಯ ಸಂಗೀತದ ಹಿರಿಯ ವಿಭಾಗದ ಪರೀಕ್ಷೆಯಲ್ಲಿ ಮಂಗಳೂರಿನ ಆಗಮ ಪೆರ್ಲ ಅವರು ಶೇ. 92.5 ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ತೇರ್ಗಡೆಯಾಗಿದ್ದಾರೆ.
ಕಳೆದ 15 ವರ್ಷಗಳಿಂದ ಕಾಸರಗೋಡಿನ ವಿದ್ವಾನ್ ಯೋಗೀಶ ಶರ್ಮಾ ಬಳ್ಳಪದವು ಅವರ ಶಿಷ್ಯರಾಗಿ ಸಂಗೀತ ಅಭ್ಯಾಸ ಮಾಡುತ್ತಿರುವ ಆಗಮ ಪೆರ್ಲ, ಕರ್ನಾಟಕ ಮಾತ್ರವಲ್ಲದೆ ಕೇರಳ ಹಾಗೂ ತಮಿಳುನಾಡಿನ ವಿವಿಧೆಡೆಯೂ ಸಂಗೀತ ಕಚೇರಿಗಳನ್ನು ನೀಡಿ ಕಲಾರಸಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. "ಗುರುಗಳ ನಿರಂತರ ಮಾರ್ಗದರ್ಶನ ಹಾಗೂ ಪ್ರೋತ್ಸಾಹದಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು," ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಕವಿ-ಸಾಹಿತಿ ದಂಪತಿಯಾದ ಡಾ. ವಸಂತಕುಮಾರ ಪೆರ್ಲ ಹಾಗೂ ಕೆ. ಶೈಲಾಕುಮಾರಿ ಅವರ ಪುತ್ರನಾಗಿರುವ ಇವರು, ಪ್ರಸ್ತುತ ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಸಿ.ಎ. (BCA) ವ್ಯಾಸಂಗ ಮಾಡುತ್ತಿದ್ದು, ಶೈಕ್ಷಣಿಕವಾಗಿಯೂ ಉತ್ತಮ ಸಾಧನೆ ತೋರುತ್ತಿದ್ದಾರೆ. ಸಂಗೀತ ಕ್ಷೇತ್ರದಲ್ಲಿನ ಇವರ ಪ್ರತಿಭೆಯನ್ನು ಗುರುತಿಸಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಈ ಸಾಲಿನ ಪ್ರತಿಭಾ ಪುರಸ್ಕಾರವನ್ನೂ ನೀಡಿ ಗೌರವಿಸಿದೆ.

-aagama%20perla.jpg)
-aagama%20perla.jpg)
