ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಹಿನ್ನೆಲೆ; ನವೆಂಬರ್ 5ರ ವರೆಗೆ ಗಾಳಿ ಸಹಿತ ಭಾರೀ ಮಳೆ ಸಾಧ್ಯತೆ
ಕಾಸರಗೋಡು: ಜಿಲ್ಲೆಯ ವಿವಿಧೆಡೆ ಮೋಡಕವಿದ ವಾತಾವರಣ ಕಂಡುಬಂದಿದ್ದು, ಕಾಸರಗೋಡು ಸೇರಿದಂತೆ ಕೇರಳದ ಐದು ಜಿಲ್ಲೆಗಳಲ್ಲಿ ಕೇಂದ್ರ ಹವಾಮಾನ ಇಲಾಖೆಯು ನವೆಂಬರ್ 2ರಂದು 'ಯೆಲ್ಲೋ ಅಲರ್ಟ್' ಘೋಷಿಸಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕೇರಳ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇದರ ಪ್ರಭಾವದಿಂದಾಗಿ ಕೇರಳದಲ್ಲಿ ನವೆಂಬರ್ 5ರ ವರೆಗೂ ಬಿರುಸಿನ ಗಾಳಿಯೊಂದಿಗೆ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.


