HEALTH TIPS

ಮತಗಳ್ಳತನ; ಮೋದಿ, ಶಾ ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ನವದೆಹಲಿ:  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಮತಗಳ್ಳತನ ಆರೋಪದ ಮೇಲೆ ಮುಂಬರುವ ದಿನಗಳಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಿ ದೇಶದ್ರೋಹದ ಪ್ರಕರಣದಡಿ ಜೈಲಿಗೆ ಕಳುಹಿಸಲಾಗುತ್ತದೆ. ಹಾಗೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಕೂಡ ಕಾನೂನು ಕ್ರಮಗಳನ್ನು ಎದುರಿಸಲಿದ್ದು, ಕಾನೂನಿನಿಂದ ತಪ್ಪಿಸಿಕೊಳ್ಳುವ ಆಲೋಚನೆಯನ್ನು ಅವರು ಮಾಡಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.


ಚುನಾವಣಾ ಅಕ್ರಮಗಳು ಮತ್ತು ಎಸ್‌ಐಆರ್ ವಿರುದ್ಧ ನಡೆದ 'ಇಂಡಿಯಾ' ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, 'ರ‍್ಯಾಲಿಗೆ ಸೇರಿರುವ ಅಪಾರ ಸಂಖ್ಯೆಯ ಜನರು ಮೋದಿ, ಶಾ ಮತ್ತು ಜ್ಞಾನೇಶ್ ಕುಮಾರ್ ಅವರಿಗೆ ಸ್ಪಷ್ಟ ಸಂದೇಶ ರವಾನಿದ್ದಾರೆ' ಎಂದು ಹೇಳಿದ್ದಾರೆ.

ಅಮಿತ್ ಶಾ ಅವರು ನರೇಂದ್ರ ಮೋದಿ ಎಲ್ಲಿಯೂ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಮೋದಿ ಎಲ್ಲಿಗೂ ಹೋಗಲು ಸಾಧ್ಯವಿಲ್ಲ, ಅವರು ಹೋಗಲು ಬಯಸಿದರೂ ಅದಕ್ಕೆ ನಾವು ಅವಕಾಶ ಮಾಡಿಕೊಡುವುದಿಲ್ಲ. ಜ್ಞಾನೇಶ್ ಕುಮಾರ್ ನಂತರ, ಮತಗಳ್ಳತನ ಮಾಡಿದ ಮೋದಿ, ಶಾ ವಿರುದ್ಧ ಕಾನೂನು ಕ್ರಮ ಜರುಗಲಿದೆ ಎಂದು ಹೇಳಿದ್ದಾರೆ.

ಇದು ಯಾವುದೇ ರಾಜಕೀಯ ಪಕ್ಷ ಅಥವಾ ನಾಯಕರ ಧ್ವನಿಯಲ್ಲ, ಬದಲಿಗೆ ಯುವಕರು, ರೈತರು ಮತ್ತು ಕಾರ್ಮಿಕರ ಧ್ವನಿ. ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಾಶಪಡಿಸಲು ನಾವು ಬಿಡುವುದಿಲ್ಲ. ಬಿಜೆಪಿ ಬಳಿ ಎಷ್ಟೇ ಅಧಿಕಾರ ಮತ್ತು ಹಣವಿದ್ದರೂ ಅವರು ಸಂವಿಧಾನಕ್ಕಿಂತ ದೊಡ್ಡವರಲ್ಲ ಎಂದು ಕಿಡಿಕಾರಿದ್ದಾರೆ.

ಮೋದಿ, ಶಾ ಅಥವಾ ಜ್ಞಾನೇಶ್ ಕುಮಾರ್ ಯಾರೇ ಇರಲಿ, ನಾವು ಅವರ ವಿರುದ್ಧ ಹಿಂಸಾಚಾರ ಮಾಡುವುದಿಲ್ಲ. ನಾವು ದ್ವೇಷವನ್ನು ಹರಡುವುದಿಲ್ಲ, ಪ್ರೀತಿಯಿಂದ ಕೆಲಸ ಮಾಡುತ್ತೇವೆ. ಆದರೆ ಸಂವಿಧಾನವನ್ನು ನಾಶಮಾಡಲು ಅವರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries