ಕುಂಬಳೆ: ಕಾಸರಗೋಡು ಜಿಲ್ಲೆಯ ಮಂಜೇಶ್ವರ, ಕಾಸರಗೋಡು, ಉದುಮ, ಕಾಞಂಗಾಡು ಹಾಗೂ ತೃಕ್ಕರಿಪ್ಪುರ ಕ್ಷೇತ್ರಗಳ ಗುಡ್ಡಗಾಡು ಪ್ರದೇಶಗಳಲ್ಲಿ ಕೆಂಪುಕಲ್ಲು ಮತ್ತು ಬಾಕ್ಸೈಟ್ ಮಣ್ಣಿನ ಅಕ್ರಮ ಲೂಟಿ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಕೇಶವ ನಾಯಕ್ ಆರೋಪಿಸಿದ್ದಾರೆ.
ಕುಂಬಳೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಣ್ಣ ಪ್ರಮಾಣದ ಪರವಾನಗಿ ನೆಪದಲ್ಲಿ ಸರ್ಕಾರಿ ಜಮೀನುಗಳಿಂದ ದಿನದ 24 ಗಂಟೆಯೂ ಮಣ್ಣು ಅಗೆದು ಅನ್ಯರಾಜ್ಯ ಹಾಗೂ ಹೊರದೇಶಗಳಿಗೆ ಸಾಗಿಸಲಾಗುತ್ತಿದೆ ಎಂದರು. ಅಧಿಕಾರಿಗಳು ಮತ್ತು ರಾಜಕಾರಣಿಗಳ ಶಾಮೀಲಿನಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದ್ದು, ಭವಿಷ್ಯದಲ್ಲಿ ತೀವ್ರ ನೀರಿನ ಕ್ಷಾಮ, ಭೂಕುಸಿತದಂತಹ ನೈಸರ್ಗಿಕ ವಿಕೋಪಗಳು ಸೃಷ್ಟಿಯಾಗಲಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಸರ್ಕಾರವು ಈ ಅಕ್ರಮ ಗಣಿಗಾರಿಕೆ ತಡೆದು, ವಾಹನಗಳನ್ನು ಜಪ್ತಿ ಮಾಡಿ ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳದಿದ್ದರೆ, ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIಐ) ಸಲ್ಲಿಸಿ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

.jpg)
