HEALTH TIPS

ಕೋಟೆಕಣಿಯಲ್ಲಿ ಕಾಸರಗೋಡು ಕನ್ನಡ ರಾಜ್ಯೋತ್ಸವ ಸಂಪನ್ನ: ಕನ್ನಡದ ಅಸ್ತಿತ್ವ ಬಲಪಡಿಸಲು ಒಗ್ಗಟ್ಟಿನ ಕರೆ

ಕಾಸರಗೋಡು: ಭಾಷಾವಾರು ಪ್ರಾಂತ್ಯ ರಚನೆಯ ಪರಿಣಾಮವಾಗಿ ಕೇರಳಕ್ಕೆ ಸೇರಿಹೋಗಿರುವ ಗಡಿನಾಡು ಕಾಸರಗೋಡಿನಲ್ಲಿ ಕನ್ನಡದ ಅಸ್ತಿತ್ವವನ್ನು ಉಳಿಸಿ ಬೆಳೆಸಲು ನಾವೆಲ್ಲರೂ ಒಗ್ಗೂಡಬೇಕಾಗಿದೆ ಎಂದು ಕಾಸರಗೋಡು ಜಿಲ್ಲಾ ಪಂಚಾಯಿತಿ ಸದಸ್ಯ ಸೋಮಶೇಖರ ಜೆ.ಎಸ್. ಕರೆ ನೀಡಿದರು.


ಕೋಟೆಕಣಿ ರಾಮನಗರದ ಶ್ರೀ ರಾಮನಿಧಿ ಸಾಂಸ್ಕøತಿಕ ಭವನ ಸಮಿತಿಯ ಆಶ್ರಯದಲ್ಲಿ ಆಯೋಜಿಸಲಾಗಿದ್ದ 'ಕಾಸರಗೋಡು ಕನ್ನಡ ರಾಜ್ಯೋತ್ಸವ' ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. "ಕಾಸರಗೋಡಿನ ಮಣ್ಣಿನಲ್ಲಿ ಕನ್ನಡದ ಬೇರು ಅತ್ಯಂತ ಗಟ್ಟಿಯಾಗಿದೆ. ಆದರೆ ಬದಲಾಗುತ್ತಿರುವ ಇಂದಿನ ಸಂದರ್ಭದಲ್ಲಿ ಅದನ್ನು ಇನ್ನಷ್ಟು ಗಟ್ಟಿಗೊಳಿಸಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ. ಗಡಿನಾಡಿನಲ್ಲಿ ನಿರಂತರವಾಗಿ ಕನ್ನಡಪರ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕವೇ ಕನ್ನಡದ ಅಸ್ಮಿತೆಯನ್ನು ಸದಾ ಜಾಗೃತವಾಗಿರಿಸಲು ಸಾಧ್ಯ," ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶನಾರಾಯಣ ತೊಟ್ಟೆತ್ತೋಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಕನ್ನಡ ಕ್ರಿಯಾ ಸಮಿತಿಯ ಗೌರವಾಧ್ಯಕ್ಷ ಈಶ್ವರಪ್ರಸಾದ್ ಎಚ್. ಸಿ. ಹಾಗೂ ಕಲಾವಿದ ಸುನಿಲ್ ಕೋಲಾರ ಶುಭ ಹಾರೈಸಿದರು.

ಸಾಧಕರಿಗೆ ಸನ್ಮಾನ:

ಗಡಿನಾಡಿನಲ್ಲಿ ನಿರಂತರ ಕನ್ನಡ ಸೇವೆ ಸಲ್ಲಿಸುತ್ತಿರುವ ಹಿರಿಯ ಕನ್ನಡ ಹೋರಾಟಗಾರ ಹಾಗೂ ಗಮಕ ಕಲಾ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್ ಅವರಿಗೆ ಸಮಾರಂಭದಲ್ಲಿ 'ಕಾಸರಗೋಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿ' ನೀಡಿ ಗೌರವಿಸಲಾಯಿತು. ಇದೇ ವೇಳೆ ದೂರದರ್ಶನದ ಭರತನಾಟ್ಯ 'ಬಿ' ಗ್ರೇಡ್ ಕಲಾವಿದೆ ಹಾಗೂ ನೃತ್ಯಶಿಕ್ಷಕಿ ವಿದುಷಿ ಸೌಮ್ಯ ಪ್ರಶಾಂತ್ ಅವರಿಗೆ ರಾಜ್ಯೋತ್ಸವ ಗೌರವ ಸಮರ್ಪಿಸಲಾಯಿತು. ಹಿರಿಯ ಸಾಹಿತಿ ಹಾಗೂ ಸಂಘಟಕ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅಭಿನಂದನಾ ನುಡಿಗಳನ್ನಾಡಿದರು.

ಸಭಾ ಕಾರ್ಯಕ್ರಮದ ಬಳಿಕ ಕನ್ನಡ ನಾಡು-ನುಡಿಯ ಗೀತ ಗಾಯನ ಹಾಗೂ 'ನಾಟ್ಯಾಮೃತ' ಶಾಲೆಯ ಪ್ರತಿಭಾವಂತ ಮಕ್ಕಳಿಂದ 'ಗೀತ-ಹೆಜ್ಜೆ' ನೃತ್ಯ ವೈವಿಧ್ಯ ಪ್ರೇಕ್ಷಕರ ಮನಸೂರೆಗೊಂಡಿತು.

ಶ್ರೀ ರಾಮನಿಧಿ ಸಾಂಸ್ಕೃತಿಕ ಭವನ ಸಮಿತಿಯ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಜಾಗೃತಿ ಸಮಿತಿ ಸಂಚಾಲಕಿ ರತ್ನ ಕುಶಲ ಕಾರ್ಯಕ್ರಮ ನಿರೂಪಿಸಿದರು. ಅಭಿಲಾಷ್ ಮುಕುಂದರಾಜ್ ವಂದಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries