HEALTH TIPS

ಗಂಗೂಬಾಯಿ ಹಾನಗಲ್ ವಿವಿ ಭರತನಾಟ್ಯ ಪರೀಕ್ಷೆ: ಕುಂಬಳೆ ನಾಟ್ಯ ವಿದ್ಯಾನಿಲಯದ ನೃತ್ಯ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

ಸಮರಸ ಚಿತ್ರಸುದ್ದಿ: ಕುಂಬಳೆ: ಕರ್ನಾಟಕದ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ನಡೆಸಿದ ಭರತನಾಟ್ಯ ವಿವಿಧ ಶ್ರೇಣಿಯ ಪರೀಕ್ಷೆಗಳಲ್ಲಿ ಕುಂಬಳೆ ನಾಟ್ಯ ವಿದ್ಯಾನಿಲಯದ ವಿದುಷಿ ಡಾ. ವಿದ್ಯಾಲಕ್ಷ್ಮಿ ಕುಂಬಳೆ ಅವರ ಶಿಷ್ಯರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಅಪೂರ್ವ ಎಡಕ್ಕಾನ (ವಿದ್ವತ್ ಅಂತಿಮ): ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಒಂದನೇ ತರಗತಿಯಿಂದಲೇ ಭರತನಾಟ್ಯ ಅಭ್ಯಾಸ ಆರಂಭಿಸಿದ್ದ ಇವರು, 1 ರಿಂದ 12 ನೇ ತರಗತಿಯವರೆಗಿನ ಶಾಲಾ ಕಲೋತ್ಸವಗಳಲ್ಲಿ ನಿರಂತರವಾಗಿ ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ತಾಂತ್ರಿಕ ಶಿಕ್ಷಣ ಪೂರೈಸಿರುವ ಇವರು, ಪ್ರಸ್ತುತ ಶಿರಿಯ ಜಿ.ಎಚ್.ಎಸ್. ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.



ಸಾತ್ವಿಕ್ ನೀರಮೂಲೆ (ವಿದ್ವತ್ ಅಂತಿಮ): ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ಹತ್ತಾರು ವೇದಿಕೆಗಳಲ್ಲಿ ಭರತನಾಟ್ಯ ಪ್ರದರ್ಶನ ನೀಡಿ ಜನಮೆಚ್ಚುಗೆ ಗಳಿಸಿರುವ ಇವರು, ಪ್ರಸ್ತುತ ಚೇವಾರು ಶ್ರೀ ಶಾರದಾ ಎ.ಯು.ಪಿ. ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.



ಚೇತನ್ ಎಡಕ್ಕಾನ (ಸೀನಿಯರ್): ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ಪ್ರಸ್ತುತ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.



ನೂತನ್ ಎಡಕ್ಕಾನ (ಸೀನಿಯರ್): ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು, ಪ್ರಸ್ತುತ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮುಂದುವರಿಸುತ್ತಿದ್ದಾರೆ.


.....................................................................................................................................................................................................................................................................................

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries