HEALTH TIPS

ಕೇರಳ ರಾಜ್ಯೋತ್ಸವ: ಜಿಲ್ಲೆಯ ಖ್ಯಾತ ಸಾಹಿತಿಗಳು, ಕಲಾವಿದರಿಗೆ ಜಿಲ್ಲಾಡಳಿತದಿಂದ ಗೌರವಾರ್ಪಣೆ

 ಸಾಂಸ್ಕೃತಿಕ ಪರಂಪರೆ ರಕ್ಷಿಸುವುದು ಇಂದಿನ ತುರ್ತು ಜವಾಬ್ದಾರಿ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾಬು ಅಬ್ರಹಾಂ

ಕಾಸರಗೋಡು: ಕೇರಳದ ಶ್ರೇಷ್ಠ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವುದರೊಂದಿಗೆ, ಇಂದಿನ ನವೀನ ಸವಾಲುಗಳನ್ನು ಸಮರ್ಥವಾಗಿ ಎದುರಿಸಬಲ್ಲ ಸದೃಢ ಸಮಾಜವನ್ನು ಕಟ್ಟುವುದು ಪ್ರಸಕ್ತ ಕಾಲಘಟ್ಟದ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾಬು ಅಬ್ರಹಾಂ ತಿಳಿಸಿದ್ದಾರೆ. 


ಕೇರಳ ರಾಜ್ಯೋದಯದ 70ನೇ ವಾರ್ಷಿಕೋತ್ಸವದ ಅಂಗವಾಗಿ, ಜಿಲ್ಲಾ ಮಾಹಿತಿ ಕಚೇರಿ (ವಾರ್ತಾ ಇಲಾಖೆ) ಹಾಗೂ ಜಿಲ್ಲಾಡಳಿತವು ಜಿಲ್ಲಾ ಸಾಕ್ಷರತಾ ಮಿಷನ್‌ನ ಸಹಯೋಗದೊಂದಿಗೆ ಕಾಸರಗೋಡಿನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಆಯೋಜಿಸಿದ್ದ ಕೇರಳ ರಾಜ್ಯೋತ್ಸವ ಮತ್ತು ಮಲಯಾಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಗರಸಭೆ ಅಧ್ಯಕ್ಷೆ ಶಹೀನಾ ಸಲೀಂ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಖ್ಯಾತ ಸಾಹಿತಿ ಡಾ. ಅಂಬಿಕಾಸುತನ್ ಮಾಂಗಾಡ್ ಅವರು ಮಾತನಾಡಿ, ಕಾಸರಗೋಡಿನ ಭಾಷಿಕ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯನ್ನು ಉಳಿಸಿ ಬೆಳೆಸುವ ಅಗತ್ಯತೆಯನ್ನು ಒತ್ತಿಹೇಳಿದರು.

ಸಾಧಕರಿಗೆ ಸನ್ಮಾನ: ಇದೇ ಸಂದರ್ಭದಲ್ಲಿ ಕಾಸರಗೋಡು ಜಿಲ್ಲೆಗೆ ಅಪಾರ ಖ್ಯಾತಿ ತಂದುಕೊಟ್ಟ ಹಿರಿಯ ಸಾಹಿತಿಗಳು ಹಾಗೂ ಕಲಾವಿದರನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಜಿಲ್ಲಾಧಿಕಾರಿ ಶ್ರೀಧನ್ಯಾ ಸುರೇಶ್ ಹಾಗೂ ನಗರಸಭಾ ಅಧ್ಯಕ್ಷರು ಸೇರಿ ಸನ್ಮಾನಿಸಿ ಗೌರವಿಸಿದರು. ಹಿರಿಯ ಸಾಹಿತಿ ಹಾಗೂ ಪತ್ರಕರ್ತ ನಾಲಪ್ಪಾಡಂ ಪದ್ಮನಾಭನ್, ಖ್ಯಾತ ವರ್ಣಚಿತ್ರ ಕಲಾವಿದ ಪಿ.ಎಸ್. ಪುಣಿಂಚಿತ್ತಾಯ, ಯಕ್ಷಗಾನ ಬೊಂಬೆಯಾಟದ ಕಲಾವಿದ ಕೆ.ವಿ. ರಮೇಶ್ ಹಾಗೂ ಖ್ಯಾತ ದೈವನರ್ತನ (ತೆಯ್ಯಂ) ಕಲಾವಿದ ಮುಕುಂದನ್ ಇಳಂಕುಟ್ಟಿ ಪೆರುಮಲಯನ್ ಗೌರವ ಸ್ವೀಕರಿಸಿದರು.

ಜಿಲ್ಲಾ ಮಾಹಿತಿ ಕಚೇರಿಯ ಸಹಾಯಕ ಸಂಪಾದಕಿ ಎ.ಪಿ. ದಿಲ್ನಾ ಹಾಗೂ ಸತ್ಯನಾರಾಯಣ ತಂತ್ರಿ ಅವರು ಸನ್ಮಾನಿತರ ಪರಿಚಯ ವಾಚಿಸಿದರು. ಹುಜೂರ್ ಶಿರಸ್ತೇದಾರ್ ಪಿ. ನಾಸಿಮುದ್ದೀನ್ ಅವರು ಸಭೆಗೆ ಭಾಷಾ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ವಿ.ವಿ. ಪ್ರಭಾಕರನ್, ರಾಧಾಕೃಷ್ಣ ಉಳಿಯತ್ತಡ್ಕ, ಜಿಲ್ಲಾ ಸಾಕ್ಷರತಾ ಮಿಷನ್ ಸಂಯೋಜಕ ಕೆ.ವಿ. ರತೀಶ್ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಕಾರ್ಯದರ್ಶಿ ಟಿ.ಎಂ.ಎ. ಕರೀಮ್ ಉಪಸ್ಥಿತರಿದ್ದರು. ಜಿಲ್ಲಾ ಮಾಹಿತಿ ಅಧಿಕಾರಿ ಎಂ. ಮಧುಸೂದನನ್ ಸ್ವಾಗತಿಸಿ, ಸಹಾಯಕ ಮಾಹಿತಿ ಅಧಿಕಾರಿ ಎ.ಪಿ. ನೌಶಾದ್ ವಂದಿಸಿದರು.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries